ಆತ್ಮಹತ್ಯೆಗೆ ಯತ್ನಿಸಿದ ಶ್ರೀನಿವಾಸ್ ಚಿನ್ನಂ ವಿರುದ್ಧ ಪ್ರಕರಣ ದಾಖಲು

crime
Published on

ಬೆಂಗಳೂರು: ಹೈಕೋರ್ಟ್ ಕಲಾಪದ ವೇಳೆ ಮುಖ್ಯ ನ್ಯಾಯಮೂರ್ತಿಗಳ ನ್ಯಾಯಪೀಠದ ಎದುರಲ್ಲೆ ರೇಜರ್‌ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಶ್ರೀನಿವಾಸ್ ಚಿನ್ನಂ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ವಿಧಾನಸೌಧ ಠಾಣೆ ಪೊಲೀಸರು ತನಿಖೆಕೈಗೊಂಡಿದ್ದಾರೆ.

ಹೈಕೋರ್ಟ್ ಭದ್ರತೆಯ ಹೆಡ್ ಕಾನ್‌ಸ್ಟೆಬಲ್ ರಾಜು ಕೊಟ್ಟ ದೂರು ಆಧರಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮೈಸೂರಿನ ವಿಜಯನಗರ ನಿವಾಸಿ ಶ್ರೀನಿವಾಸ್ ಚಿನ್ನಂ ವಿರುದ್ದ ಎ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಸ್ಥಳ ಮಹಜರು ನಡೆಸಿದ್ದಾರೆ. ಸಾಕಷ್ಟು ಭದ್ರತೆಯ ನಡುವೆಯೂ ರೇಜರ್ ಹೇಗೆ ಕೋರ್ಟ್ ಒಳಗೆ ತರಲಾಗಿದೆ ಎಂದು ತನಿಖೆ ಮುಂದುವರಿಸಿದ್ದಾರೆ. ಪೊಲೀಸ್ ಭದ್ರತೆಯ ನಡುವೆಯೂ ಬುಧವಾರ ಮಧ್ಯಾಹ್ನ ಕುತ್ತಿಗೆ ಕೊಯ್ದುಕೊಂಡಿದ್ದ ಶ್ರೀನಿವಾಸ್ ಚಿನ್ನಂಗೆ ಮೊದಲು ಹೈಕೋರ್ಟ್‌ನ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಯಿತು. ಸದ್ಯ ಬೌರಿಂಗ್ ಆಸ್ಪತ್ರೆಯಲ್ಲಿ ಗಾಯಾಳುಗೆ ಚಿಕಿತ್ಸೆ ಮುಂದುವರಿದಿದೆ. ಗಾಯಾಳು ಚೇತರಿಸಿಕೊಂಡ ನಂತರ ಆತನ ಹೇಳಿಕೆ ಪಡೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net