ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ದೂರು ದಾಖಲು

Crime Logo
Published on

ಬೆಂಗಳೂರು: ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು
ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನೂರು ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿರುವ ಸನಾತನ ಧರ್ಮೀಯ ಸಮುದಾಯವನ್ನೇ ನಾಶ ಮಾಡುವಂತೆ ಕರೆಕೊಟ್ಟಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಮೇಶ್ ಮನವಿ ಮಾಡಿದ್ದಾರೆ.
ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರು ಸೆ.೨ ರಂದು ಕಾರ್ಯಕ್ರಮವೊಂದರಲ್ಲಿ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಮತ್ತು ಕರೊನಾಗಳಂತಹ ಮಾರಣಾಂತಿಕ ಕಾಯಿಲೆಗಳ ವೈರಸ್‌ಗಳಿಗೆ ಹೋಲಿಸಿದ್ದು, ಈ ವೈರಸ್‌ಗಳನ್ನು ಬೇರು ಸಹಿತ ನಾಶಗೊಳಿಸುವ ರೀತಿಯಲ್ಲೇ ಸನಾತನ ಧರ್ಮೀಯರನ್ನೂ ಸಹ ನಾಶಗೊಳಿಸಿದರೆ ಮಾತ್ರ ಈ ದೇಶಕ್ಕೆ ಒಳಿತಾಗುತ್ತದೆ ಎಂಬ ಆಘಾತಕಾರಿ ಹೇಳಿಕೆಯನ್ನು ನೀಡಿದ್ದಾರೆ. ಆ ಮೂಲಕ ಕೇವಲ ಭಾರತವೊಂದರಲ್ಲೇ ವಾಸಿಸುತ್ತಿರುವ ನೂರು ಕೋಟಿಗೂ ಹೆಚ್ಚು ಸನಾತನ ಹಿಂದೂ ಧರ್ಮೀಯ ಸಮುದಾಯದ ಮಾರಣ ಹೋಮಕ್ಕೆ ಕರೆ ಕೊಡುವ ಮೂಲಕ ಭಾರತ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡು ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net