ಪ್ರಜ್ವಲ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ

tth congres
ಪ್ರಜ್ವಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತೀರ್ಥಹಳ್ಳಿಯಲ್ಲಿ ಕ್ಷೇತ್ರ ಕಾಂಗ್ರೆಸ್ ಮಹಿಳಾ ಘಟಕದಿಂದ ಮನವಿ ಸಲ್ಲಿಸಲಾಯಿತು. ಅನ್ನಪೂರ್ಣಾ ಮೋಹನ್, ಜಯಾ ರಾವ್, ಗೀತಾ ರಮೇಶ್ ಇತರರಿದ್ದರು.
Published on

ತೀರ್ಥಹಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಅತ್ಯಂತ ಹೇಯ ಕೃತ್ಯ. ಸರ್ಕಾರ ಅವರನ್ನು ಬಂಧಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆಗ್ರಹಿಸಿ ಕ್ಷೇತ್ರ ಕಾಂಗ್ರೆಸ್ ಮಹಿಳಾ ಘಟಕದ ಸದಸ್ಯರು ಮಂಗಳವಾರ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು. ಮಹಿಳೆಯರ ಮಂಗಳ ಸೂತ್ರ, ರಾಮಾಯಣದ ಬಗ್ಗೆ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಸೇರಿ ಯಾವೊಬ್ಬ ಬಿಜೆಪಿ ಪ್ರಮುಖರೂ ಪ್ರಜ್ವಲ್ ರೇವಣ್ಣ ಅವರ ಹೇಯ ಕೃತ್ಯವನ್ನು ಖಂಡಿಸದೆ ಮೌನ ವಹಿಸಿರುವುದು ಆಶ್ಚರ್ಯ. ಅಲ್ಲದೆ ಒಲಿಂಪಿಕ್ ಪದಕ ವಿಜೇತ ದೇಶದ ಹೆಮ್ಮೆಯ ಮಹಿಳಾ ಕ್ರೀಡಾಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆಯರ ಬೆತ್ತಲೆ ಮೆರವಣಿಗೆ ಬಗ್ಗೆಯೂ ಕ್ರಮ ಕೈಗೊಳ್ಳದಿರುವುದು ದುರದೃಷ್ಟಕರ ಎಂದು ತಿಳಿಸಿದ್ದಾರೆ. ಅನ್ನಪೂರ್ಣಾ ಮೋಹನ್, ಜಯಾ ಜಿ. ರಾವ್, ಗೀತಾ ರಮೇಶ್, ಸುಶೀಲಾ ಶೆಟ್ಟಿ, ಜೀನಾ ವಿಕ್ಟರ್, ಶಬನಂ, ಮಂಜುಳಾ ನಾಗೇಂದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net