ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಎಫ್‌ಐಆರ್ ದಾಖಲು!

bjpo
Published on

ಬೆಂಗಳೂರು: ವಿವಿಧ ಗುಂಪುಗಳು ಮತ್ತು ವರ್ಗಗಳ ನಡುವೆ ದ್ವೇಷ ಹರಡಲು ಮತ್ತು ಉತ್ತೇಜಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ಮೇಲೆ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಏಪ್ರಿಲ್ 23 ರಂದು ಕಾಂಗ್ರೆಸ್ ಪ್ರಣಾಳಿಕೆಯೋ ಅಥವಾ ಮುಸ್ಲಿಂ ಲೀಗ್ ಪ್ರಣಾಳಿಕೆ ಎಂದು ಬಿಜೆಪಿ 'ಎಕ್ಸ್' ನಲ್ಲಿ ಪೋಸ್ಟ್ ಮಾಡಿತ್ತು.

ಜನತಾ ಪ್ರಾತಿನಿಧ್ಯ ಕಾಯಿದೆಯ ಸೆಕ್ಷನ್ 125 ಮತ್ತು ಐಪಿಸಿ 153 ಎಫ್‌ಐಆರ್ ದಾಖಲಿಸಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಏಪ್ರಿಲ್​ 20 ರಂದು ಧರ್ಮ, ಭಾಷೆ ಜಾತಿ, ಸೌಹಾರ್ದತೆಗೆ ದಕ್ಕೆ ತರಲು ಯತ್ನಿಸಿದ ಆರೋಪದ ಹಿನ್ನಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಎಫ್​ಐಆರ್ ದಾಖಲಾಗಿತ್ತು.

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಏಪ್ರಿಲ್ 26 ಮತ್ತು ಮೇ 7 ರಂದು ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net