ಕಾರಿಗೆ ಪೆಟ್ರೋಲ್ ತುಂಬಿಸಿ ಹಣ ಪಾವತಿಸದೆ ಪರಾರಿಯಾದ

robbery, investigation, delay,
Published on

ಮಂಗಳೂರು: ಕಾರಿಗೆ ಪೆಟ್ರೋಲ್ ತುಂಬಿಸಿ ಹಣ ಪಾವತಿಸದೆ ಪರಾರಿಯಾಗಿರುವ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 20ರಂದು ರಾತ್ರಿ 11.19ಕ್ಕೆ ಕಾವೂರಿನ ಪೆಟ್ರೋಲ್ ಪಂಪ್‌ನಲ್ಲಿ ನೀಲಿ ಬಣ್ಣದ ಕಾರಿಗೆ ಫುಲ್‌ಟ್ಯಾಂಕ್ ಪೆಟ್ರೋಲ್ ತುಂಬಿಸಿದ ಅಪರಿಚಿತ 4,100.60 ರೂ. ಬಿಲ್ ಪಾವತಿಸದೆ ವೇಗವಾಗಿ ಕಾವೂರು ಜಂಕ್ಷನ್ ಕಡೆಗೆ ಪರಾರಿಯಾಗಿದ್ದಾನೆ. ಪೆಟ್ರೋಲ್ ಪಂಪ್ ಸಿಬ್ಬಂದಿ ಕಾರನ್ನು ಬೆನ್ನಟ್ಟಿ ನೋಡಿದಾಗ ಕಾರಿನ ಎದುರು ಮತ್ತು ಹಿಂಬದಿ ನೋಂದಣಿ ಸಂಖ್ಯೆ ಇರಲಿಲ್ಲ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net