ಭೂ ಕಬಳಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಬಾಲಿವುಡ್​​ನ ಖ್ಯಾತ ಫೈನಾನ್ಶಿಯರ್ ಸಾವು

ಪಿಚ ಯುಸು್
Published on

ಮುಂಬೈ: 50 ಕೋಟಿ ರೂ. ಭೂ ಕಬಳಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಾಲಿವುಡ್ ಚಲನಚಿತ್ರ ಫೈನಾನ್ಶಿಯರ್ ಯೂಸುಫ್ ಲಕ್ಡವಾಲಾ ಜೈಲಿನಲ್ಲೇ ಸಾವನ್ನಪ್ಪಿದ್ದಾನೆ.

50 ಕೋಟಿ ರೂ. ಭೂ ಕಬಳಿಕೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿ, ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದ ಉದ್ಯಮಿ ಮತ್ತು ಚಲನಚಿತ್ರ ಫೈನಾನ್ಶಿಯರ್ ಯೂಸುಫ್ ಲಕ್ಡವಾಲಾ ಜೈಲಿನಲ್ಲಿ ಮೃತಪಟ್ಟಿದ್ದಾನೆ.

ಮೃತದೇಹವನ್ನು ಜೆಜೆ ಆಸ್ಪತ್ರೆಯಲ್ಲಿಡಲಾಗಿದ್ದು, ಆಕಸ್ಮಿಕ ಸಾವಿನ ವರದಿಯನ್ನು ದಾಖಲಿಸಲಾಗಿದೆ. ಸಾವಿಗೆ ನಿಖರವಾದ ಕಾರಣ ಇನ್ನೂ ಪತ್ತೆಯಾಗಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net