ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಚಿತ್ರ ನಟಿ ಶೋಭನಾ..!

shabana
Published on

ತಿರುವನಂತಪುರಂ: ನಟಿ ಶೋಭಾನಾ ರಾಜಕೀಯ ಪ್ರವೇಶ ಮಾಡಲಿದ್ದಾರೆ. ಅವರು ಕೇರಳದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ.

ತಿರುವನಂತಪುರಂ ಲೋಕಸಭಾ ಕ್ಷೇತ್ರಕ್ಕೆ ಅವರು ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ. ಫೆಬ್ರವರಿ 27 ರಂದು ಕೇರಳದಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಅಂದು ಪಕ್ಷ ಮೊದಲ ಪಟ್ಟಿ ಬಿಡುಗಡೆ ಮಾಡಲಿದೆ. ತಿರುವನಂತಪುರಂ ಕ್ಷೇತ್ರದ ಸಂಸದ ಶಶಿತರೂರ್ ಅವರನ್ನು ಎದುರಿಸಲು ಸೋಭಾನಾ ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳಿವೆಯಂತೆ.

ಆದರೆ, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮತ್ತು ನಟ ಸುರೇಶ್ ಕುಮಾರ್ ಕೂಡ ಇದೇ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಆದರೂ ಸಹ ಆ ಸ್ಥಾನದಿಂದ ನಟಿ ಶೋಭನಾಗೆ ಸೀಟು ಸಿಗುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ. ಇತ್ತೀಚೆಗೆ ತ್ರಿಶೂರಿನಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶದಲ್ಲೂ ಶೋಭನಾ ಭಾಗವಹಿಸಿದ್ದರು. ಆ ಸಮಾರಂಭದಲ್ಲಿ ತೆಗೆದ ಫೋಟೋವನ್ನೂ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ವೈರಲ್​ ಆಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net