ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ: ಜುಲೈ ೩೦ರಂದು ಅಂತಿಮ ತೀರ್ಪು ಪ್ರಕಟ

prajwal revanna
Published on

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಗಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜುಲೈ ೩೦ರಂದು ಅಂತಿಮ ತೀರ್ಪು ಪ್ರಕಟಿಸಲಿದೆ.

ಜುಲೈ ೩೦ ರಂದು ನ್ಯಾ.ಸಂತೋಷ್ ಗಜಾನನ ಭಟ್ ಅವರು ತೀರ್ಪು ನೀಡಲಿದ್ದಾರೆ. ಎರಡು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ಗೆ ಈಗಾಗಲೇ ಢವ-ಢವ ಶುರುವಾಗಿದೆ.

ಒಂದು ವೇಳೆ ನ್ಯಾಯಾಲಯವು ಶಿಕ್ಷೆ ಎಂದು ತೀರ್ಪು ನೀಡಿದರೆ ಕನಿಷ್ಠ ೧೦ ವರ್ಷ ಜೀವಾವಧಿ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಮೈಸೂರಿನ ಕೆ.ಆರ್.ನಗರದ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪದದಡಿ ೨೦೨೩ರಲ್ಲಿ ಪ್ರಜ್ವಲ್ ರೇವಣ್ಣ, ಶಾಸಕ ರೇವಣ್ಣ ಹಾಗೂ ಪತ್ನಿ ಭವಾನಿ ರೇವಣ್ಣ ಸೇರಿದಂತೆ ೯ ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಸಿಐಡಿ ವಿಶೇಷ ತನಿಖಾ ತಂಡವು ೨ ಸಾವಿರ ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು.

ಕಳೆದ ಮೇ ೨ರಿಂದ ನ್ಯಾಯಾಲಯವು ವಿಚಾರಣೆ ಆರಂಭಿಸಿತ್ತು. ಇದುವರೆಗೂ ೨೬ ಮಂದಿ ಸಾಕ್ಷಿದಾರರನ್ನ ವಿಚಾರಣೆ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ೧೮೦ ದಾಖಲಾತಿಗಳನ್ನು ಸಲ್ಲಿಸಲಾಗಿದೆ. ನ್ಯಾಯಾಲಯವು ಅಂತಿಮ ತೀರ್ಪನ್ನು ಜುಲೈ ೩೦ರಂದು ಪ್ರಕಟಿಸಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net