ಭ್ರೂಣ ಲಿಂಗ ಪತ್ತೆ, ಹತ್ಯೆ ಪ್ರಕರಣದ ಮಾಹಿತಿ ನೀಡಿದವರಿಗೆ ಸಿಗಲಿದೆ​ ಬಹುಮಾನ...

baby
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಿಷೇಧವಿದ್ದರೂ ಭ್ರೂಣ ಹತ್ಯೆ ಪ್ರಕರಣಗಳು ರಾಜ್ಯದ ಹಲವೆಡೆ ಸುದ್ದಿ ಮಾಡುತ್ತಿವೆ.  ಮೈಸೂರು,ಮಂಡ್ಯ ಭಾಗದಲ್ಲಿ ಗರ್ಭಪಾತ ಮಾಡಿಸುತ್ತಿದ್ದ ಭಾರೀ ಜಾಲವನ್ನೇ ಬೇಧಿಸಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಸ್ಕ್ಯಾನಿಂಗ್ ಸೆಂಟರ್‌ನ ಮೇಲೆ ಹದ್ದಿನ ಕಣ್ಣಿಟ್ಟ ಅಧಿಕಾರಿಗಳು ಭ್ರೂಣ ಪತ್ತೆ, ಹತ್ಯೆ ಬಗ್ಗೆ ಮಾಹಿತಿ ನೀಡಿದವರಿಗೆ ಭಾರಿ ಬಹುಮಾನವನ್ನು ನೀಡುವುದಾಗಿ ಘೋಷಿಸಿದ್ದಾರೆ.

ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮೈಸೂರಿನ‌ ತಾಲೂಕು ಆರೋಗ್ಯಧಿಕಾರಿ ಡಾ.ರಾಜೇಶ್ವರಿ ಮತ್ತು ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಜಿಲ್ಲಾ ಕುಟುಂಬ ಕಲ್ಯಾಣಧಿಕಾರಿ ಡಾ.ರವಿ ಅವರನ್ನ ಅಮಾನತು ಮಾಡಲಾಗಿತ್ತು.

ಈ ಪ್ರಕರಣ ಹೆಚ್ಚು ತೀವ್ರತೆ ಪಡೆಯುತ್ತಿದ್ದು ಮೈಸೂರು ಜಿಲ್ಲೆಯ 139 ಸ್ಕ್ಯಾನಿಂಗ್ ಸೆಂಟರ್‌ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ. ಭ್ರೂಣ ಹತ್ಯೆ ಬಗ್ಗೆ ಮಾಹಿತಿ ನೀಡಿದರೆ 50 ಸಾವಿರ ರೂ. ಬಹುಮಾನ ನೀಡಲಾಗುತ್ತದೆ. ಮಾಹಿತಿ ನೀಡಿದವರ ಬಗ್ಗೆ ಗೌಪ್ಯತೆ ಕಾಪಾಡಲಾಗುವುದು.  ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ.

ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಮೈಸೂರು ಜಿಲ್ಲೆಯಲ್ಲಿಅಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ. ಹೀಗಾಗಿ ಮೈಸೂರು ನಗರ ಜಿಲ್ಲೆಯ 139 ಸ್ಕ್ಯಾನಿಂಗ್ ಸೆಂಟರ್‌ನ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಟಾಸ್ಕ್‌ಪೋರ್ಸ್‌ನಿಂದ ಎಲ್ಲಾ ಕಡೆ ನಿಗಾ ಇಡಲಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net