

ಭೋಪಾಲ್: ಮಧ್ಯಪ್ರದೇಶದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪೆಟ್ರೋಲ್, ಡೀಸೆಲ್ಗಳ ಬೆಲೆ ಸತತವಾಗಿ ಏರುತ್ತಿರುವದರಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ ಎಂದು ಆರೋಪಿಸಿ, ಕೇಂದ್ರ ಸರ್ಕಾರ ಮತ್ತು ಮಧ್ಯಪ್ರದೇಶ ರಾಜ್ಯಸರ್ಕಾರದ ವಿರುದ್ಧ 'ಸೈಕಲ್' ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಯಾವುದೇ ಪ್ರತಿಭಟನೆ ನಡೆಸುವುದಿದ್ದರೂ ಅನುಮತಿ ತೆಗೆದುಕೊಳ್ಳಬೇಕು. ಅದರಲ್ಲೂ ಕರೊನಾ ವೈರಸ್ ಸಾಂಕ್ರಾಮಿಕ ರೋಗದ ಈ ಸಂದರ್ಭದಲ್ಲಿ ಗುಂಪು ಸೇರುವುದನ್ನೆಲ್ಲ ನಿಷೇಧಿಸಲಾಗಿದೆ. ಆದರೆ ದಿಗ್ವಿಜಯ ಸಿಂಗ್ ಯಾವುದೇ ಅನುಮತಿ ಪಡೆದಿರಲಿಲ್ಲ. ಇದನ್ನೂ ಓದಿ: ರಾಹುಲ್ ಗಾಂಧಿಯೇ ಪಕ್ಷ ಮುನ್ನಡೆಸಲಿ: ಸಚಿನ್ ಪೈಲಟ್
ರಾಜ್ಯಸಭಾ ಸದಸ್ಯರೂ ಆಗಿರುವ ದಿಗ್ವಿಜಯ ಸಿಂಗ್ ಅವರು ಹಲವು ಕಾಂಗ್ರೆಸ್ ಸದಸ್ಯರೊಂದಿಗೆ ಸೇರಿ ಸೈಕಲ್ ತುಳಿಯುತ್ತ, ಪ್ರತಿಭಟನೆ ನಡೆಸುತ್ತಿದ್ದರು. ಇವರೆಲ್ಲ ರೋಶನ್ಪುರ ಚೌಕದಿಂದ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಅವರ ನಿವಾಸಕ್ಕೆ ಸೈಕಲ್ನಲ್ಲಿ ತೆರಳುತ್ತಿದ್ದರು. ಇದನ್ನೂ ಓದಿ: ಭಾರತ-ಚೀನಾ ಗಡಿ ಬಿಕ್ಕಟ್ಟು: ಪರಿಸ್ಥಿತಿ ಗಂಭೀರವಾಗಿದೆ ಎಂದ ಬ್ರಿಟಿಷ್ ಪ್ರಧಾನಿ
ಮಾರ್ಗ ಮಧ್ಯೆಯಲ್ಲಿಯೇ ತಡೆದ ಪೊಲೀಸರು ಅವರನ್ನೆಲ್ಲ ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿದ್ದಾರೆ. (ಏಜೆನ್ಸೀಸ್)