ಸ್ಯಾಂಡಲ್​ವುಡ್​ ಸಿಂಪಲ್​ ಸ್ಟಾರ್​ಗೆ ಸಂಕಷ್ಟ! ರಕ್ಷಿತ್ ಶೆಟ್ಟಿ ವಿರುದ್ಧ ದಾಖಲಾಯ್ತು ಎಫ್​ಐಆರ್​

rakshith shetty
Published on

ಬೆಂಗಳೂರು: ಕನ್ನಡ ಚಿತ್ರರಂಗದ ಸಿಂಪಲ್ ಸ್ಟಾರ್​, ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು, ಬೆಂಗಳೂರಿನ ಯಶವಂತಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 'ನ್ಯಾಯ ಎಲ್ಲಿದೆ' ಚಿತ್ರದ ಹಾಡು ಮತ್ತು 'ಗಾಳಿಮಾತು' ಸಿನಿಮಾದ ಹಾಡುಗಳನ್ನು ಅನುಮತಿ ಇಲ್ಲದೆ ಬಳಸಿಕೊಂಡಿದ್ದಾರೆ ಎಂದು ಎಂಆರ್​ಟಿ ಮ್ಯೂಸಿಕ್ ಪಾಲುದಾರರಾದ ನವೀನ್ ಕುಮಾರ್​ ಆರೋಪಿಸಿದ್ದಾರೆ. 

ಪರಮ್ವಾ ಸ್ಟುಡಿಯೋಸ್​ ಬ್ಯಾನರ್​ನಲ್ಲಿ ಮೂಡಿಬಂದ ಬ್ಯಾಚುಲರ್​ ಪಾರ್ಟಿ ಚಿತ್ರದಲ್ಲಿ ಈ ಹಾಡುಗಳನ್ನು ಬಳಿಸಿಕೊಳ್ಳಲಾಗಿದೆ ಎಂದು ನವೀನ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಟ ರಕ್ಷಿತ್ ಶೆಟ್ಟಿ ಏನು ಹೇಳಲಿದ್ದಾರೆ ಎಂಬುದನ್ನು ಸದ್ಯ ಕಾದು ನೋಡಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net