

ಬೆಂಗಳೂರು: ಕನ್ನಡ ಚಿತ್ರರಂಗದ ರಿಯಲ್ ಸ್ಟಾರ್ ಉಪೇಂದ್ರ ವಿರುದ್ಧ ಇಂದು ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಾತಿ ನಿಂದನೆ ಆರೋಪದಡಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಉತ್ತಮ ಭವಿಷ್ಯಕ್ಕೆ ಸಾಂಸ್ಕೃತಿಕ ಚಟುವಟಿಕೆಗಳು ಅಗತ್ಯ
ಎಫ್ಐಆರ್ಗೆ ಕಾರಣ, ನಟ ಉಪೇಂದ್ರ ಅವರು ಕಾರ್ಯಕ್ರಮವೊಂದರಲ್ಲಿ ನೀಡಿದ್ದ ಹೇಳಿಕೆಯೊಂದು ಸಾಮಾಜಿಕ ಜಾಲಾತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ಇದೀಗ ನಿರ್ದಿಷ್ಟ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಉಲ್ಲೇಖಿಸಿ ದೂರು ನೀಡಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಿಂದ ದೂರು ಸ್ವೀಕರಿಸಿದ ಪೊಲೀಸರು, ನಟನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಇತ್ತೀಚಿಗೆ ನಡೆದ ಕಾರ್ಯಕ್ರಮವೊಂದರಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಲ್ಲದೇ, ಅವಹೇಳನ ಶಬ್ಧ ಬಳಕೆ ಮಾಡಿದ್ದಾರೆ ಎಂದು ಉಪೇಂದ್ರ ವಿರುದ್ಧ ಮದೂಸೂಧನ್ ಕೆ.ಎಸ್ ಎಂಬುವವರು ದೂರು ಸಲ್ಲಿಸಿದ್ದಾರೆ. ನಟನ ಪೋಸ್ಟ್ ಮತ್ತು ಹೇಳಿಕೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೆ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ.
ತನ್ನ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಉಪೇಂದ್ರ, ತಾವು ಹಾಕಿದ್ದ ವಿಡಿಯೋವನ್ನು ಫೇಸ್ ಬುಕ್ ಮತ್ತು ಸಾಮಾಜಿಕ ಜಾಲತಾಣದಿಂದ ಡಿಲೀಟ್ ಮಾಡಿದ್ದಾರೆ. ಬಳಿಕ ಕ್ಷಮೆ ಕೂಡ ಕೇಳಿದ್ದಾರೆ.
ಇದನ್ನೂ ಓದಿ: ಉತ್ತಮ ಭವಿಷ್ಯಕ್ಕೆ ಸಾಂಸ್ಕೃತಿಕ ಚಟುವಟಿಕೆಗಳು ಅಗತ್ಯ
ಉಪೇಂದ್ರ ಮಾತನಾಡಿದ ವೀಡಿಯೋದಲ್ಲೇನಿದೆ?: "ಇನ್ನೋಸೆಂಟ್ ಹೃದಯಗಳಿಂದಲೇ ನಿಜವಾದ ಬದಲಾವಣೆ ಸಾಧ್ಯ. ಇನ್ನೋಸೆಂಟ್ ಅಂದರೆ ಮುಗ್ಧತೆ ಇದೆಯಲ್ಲಾ ಅದೇ ಸತ್ಯದ ಮನಸ್ಸು. ಇನ್ನೋಸೆಂಟ್ ಮನಸ್ಸುಗಳು ಇಲ್ಲಿ ಜಾಯಿನ್ ಆಗಲಿ ಮಾತನಾಡಲಿ, ಹೇಳುವುದಕ್ಕೆ ಇಷ್ಟಪಡ್ತೀನಿ. ಅವರಿಂದ ನಮಗೆ ತುಂಬಾ ಬೆನಿಫಿಟ್ ಇದೆ, ಸಜೆಷನ್ ಕೂಡ ಉತ್ತಮವಾಗಿರುತ್ತದೆ. ಏನೋ ಒಂದು ಕೇರ್ಲೆಸ್ ಆಗಿ ಏನೋ ಒಂದು ಸಜೆಸ್ಟ್ ಮಾಡೋಣ, ಕೇರ್ಲೆಸ್ಆಗಿ ಅವಹೇಳನ ಮಾಡುವುದಾಗಲಿ, ಏನೋ ನಾವು ಮಾತನಾಡಬೇಕು ಟೈಮ್ ಇದೆ ಎಂದು ಬಾಯಿಗೆ ಬಂದಂತೆ ಕಮೆಂಟ್ ಮಾಡೋಣ ಎನ್ನುವವರೂ ಇದ್ದಾರೆ. ಅಂತಹವರನ್ನ ಬಿಡಿ, ಅವರನ್ನು ಏನೂ ಮಾಡೋಕೆ ಆಗಲ್ಲ. "ಊರು ಎಂದಮೇಲೆ ಹೊಲೆಗೇರಿ ಇರುತ್ತೆ", ಆ ತರಹ ಇಂಥವರೂ ಇರುತ್ತಾರೆ ಜಗತ್ತಲ್ಲಿ ಏನೂ ಮಾಡೋಕಾಗಲ್ಲ. ಅವರನ್ನೆಲ್ಲಾ ಬಿಟ್ಟಾಕೋಣ ಅದನ್ನು ಓದೋದು ಬೇಡ ನಾವು. ಸ್ವಲ್ಪ ನಾವು ಹೇಳ್ತಿರೋದು ಇಂಥ ಒಂದು ಪ್ಯೂರ್ ಜನರನ್ನ ಪ್ರೀತಿಸೋವಂಥದ್ದು, ಜನರನ್ನು ಪ್ರೀತಿಸುವುದೇ ಜನಾರ್ಧನನ ಪೂಜೆ ಎನ್ನುತ್ತಾರೆ. ಜನರನ್ನು ಪ್ರೀತಿಸುವುದೇ ದೇಶಪ್ರೇಮ ಎನ್ನುತ್ತಾರೆ' ಎಂದು ಹೇಳಿದ್ದಾರೆ.