ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ; ಗುಬ್ಬಿ ಶಾಸಕ ಶ್ರೀನಿವಾಸ್ ವಿರುದ್ಧ FIR

S R Srinivas
ಎಸ್​ ಆರ್​ ಶ್ರೀನಿವಾಸ್
Published on

ತುಮಕೂರು: ಕಾಂಗ್ರೆಸ್ ನಾಯಕನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಮೇಲೆ ಎಫ್‍ಐಆರ್ ದಾಖಲಾಗಿದೆ.

ನಡೆದಿದ್ದೇನು?: ಟೆಂಡರ್ ಕಾಮಗಾರಿಯಲ್ಲಿ ಅನ್ಯಾಯ ನಡೆದಿದೆ ಎಂದು ಕಳೆದ ಗುರುವಾರ ರಾತ್ರಿ ಪಿಡಬ್ಲ್ಯೂಡಿ ಇಲಾಖೆ ಕಚೇರಿ ಮುಂಭಾಗ ಕಾಂಗ್ರೆಸ್ ಮುಖಂಡ ರಾಯಸಂದ್ರ ರವಿಕುಮಾರ್ ಧರಣಿಗೆ ಕುಳಿತಿದ್ದರು.

ತಡರಾತ್ರಿ ಸುಮಾರು 11.30 ಗಂಟೆಗೆ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್‌.ಆರ್‌. ಶ್ರೀನಿವಾಸ್‌ ಮತ್ತು ಸಹಚರರು ಪಿಡಬ್ಲ್ಯುಡಿ ಕಚೇರಿ ಆವರಣಕ್ಕೆ ನುಗ್ಗಿ ರಾಯಸಂದ್ರ ರವಿಕುಮಾರ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿದ್ದ ಸಾಮಗ್ರಿಗಳನ್ನು ಚೆಲ್ಲಾಪಿಲ್ಲಿ ಮಾಡಿ ಸ್ಥಳವನ್ನು ಅಸ್ತವ್ಯಸ್ಥ ಮಾಡಿದ್ದಾರೆ.  ಶಾಸಕ ಹಾಗೂ ಅವರ ಸಹಚರರು ಏಕಾಏಕಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ರವಿಕುಮಾರ್ ನೀಡಿದ ದೂರಿನಡಿ ತುಮಕೂರಿನತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ  ಎಫ್‍ಐಆರ್ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net