ಮೆಟ್ರೋ ಅಧಿಕಾರಿಯಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ; FIR ದಾಖಲು

Namma Metro
Published on

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ನಮ್ಮ ಮೆಟ್ರೋ ರೈಲಿನಲ್ಲಿ ಮಹಿಳಾ ಪ್ರಯಾಣಿಕರ ಜೊತೆ ಅನುಚಿತ ವರ್ತನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಬಗ್ಗೆ ನಿರಂತರವಾಗಿ ವರದಿಗಳು ಬರುತ್ತಿವೆ. ಆದರೆ, ಇದೀಗ ಅಧಿಕಾರಿಯೊಬ್ಬರು ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಸುಬ್ರಮ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ Assistant Section Officer ಆಗಿ ಕಾರ್ಯ ನಿರ್ವಹಿಸುತ್ತಿರುವ ಗಜೇಂದ್ರ ಎಂಬುವವರ ವಿರುದ್ಧ ಆರೋಪ ಕೇಳಿ ಬಂದಿದ್ದು, ಈ ಸಂಬಂಧ FIR ದಾಖಲಾಗಿದೆ.

ದೂರಿನಲ್ಲಿ ಏನಿದೆ ?

ಅಧಿಕಾರಿ ಗಜೇಂದ್ರ ಮಹಿಳಾ ಸಿಬ್ಬಂದಿಗಳಿಗೆ ಅಶ್ಲೀಲ ಪದಗಳಿಂದ ನಿಂದಿಸುವುದಲ್ಲದೆ ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸಹಕರಿಸದ ಸಿಬ್ಬಂದಿಯನ್ನು ಬೇರೆಡೆ ವರ್ಗಾವಣೆ ಮಾಡುವುದಾಗಿ ಬೆದರಿಸಿದ್ದಾನೆ. ಸೆಕ್ಯೂರಿಟಿ ಏಜೆನ್ಸಿ ಮಾಲೀಕನಿಂದಲೂ ಸಹಕರಿಸುವಂತೆ ಒತ್ತಾಯ ಮಾಡಿದ ಆರೋಪ ಕೇಳಿ ಬಂದಿದೆ. ಸಹಕರಿಸಿ ಇಲ್ಲ ಕೆಲಸದಿಂದ ತೆಗೆಯುತ್ತೇನೆ ಅಂತಾರೆ ಎಂದು ಮಹಿಳಾ ಸಿಬ್ಬಂದಿ ಪೊಲೀಸರು ಹಾಗೂ ಬಿಎಂಆರ್​ಸಿಎಲ್​ ಅಧಿಕಾರಿಗಳಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net