ಸಿದ್ದರಾಮಯ್ಯ ವಿರುದ್ಧ ಹೋರಾಡ್ತಿರುವ ಸ್ನೇಹಮಯಿ ಕೃಷ್ಣ ವಿರುದ್ಧ FIR

SnehamayiKrishna
Published on

ಬೆಂಗಳೂರು : ಮೂಡಾ ಪ್ರಕರಣ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೋರಾಟ ಮಾಡುತ್ತಿರುವ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್​ಐಆರ್ ( FIR ) ದಾಖಲಾಗಿದೆ.

2020ರಲ್ಲಿ ಗಂಡ ಹೃದಯಘಾತದಿಂದ ನಿಧನ ಹೊಂದಿದ್ದಾರೆ. ಡೆತ್ ಬೆನಿಫಿಸರಿ ಹಣ ಹಾಗು ನನ್ನ ಒಡವೆ ಪಡೆಯುವ ವಿಚಾರ ನ್ಯಾಯಾಲಯದಲ್ಲಿ ಪ್ರಕರಣ ಇದೆ. ಪ್ರಕರಣ ಮುಗಿಸಿ ತಾಯಿ ಜೊತೆ ಮನೆಗೆ ಬರುವಾಗ ಅಟ್ಯಾಕ್ ಮಾಡಿದ್ದಾರೆ. 18/7/2024 ರಂದು ಕೋರ್ಟ್ ಮುಗಿಸಿಕೊಂಡು‌ ಹೋಗುವಾಗ ಅಟ್ಯಾಕ್ ಮಾಡಿದ್ದಾರೆಂದು ಲಾವಣ್ಯ ಎಂಬ ಮಹಿಳೆ ಆರೋಪ ಮಾಡಿದ್ದಾರೆ. ಅತ್ತೆ, ಮಾವ ಹಾಗು ಅತ್ತೆ ಸಹೋದರನ ಪರವಾಗಿ ಸ್ನೇಹಮಯಿ ಕೃಷ್ಣ ಕಿರುಕುಳ ನೀಡುತ್ತಿದ್ದಾನೆ.

ಹಮಯಿ ಕೃಷ್ಣ ವಿರುದ್ಧ FIR

ಈ ಎಫ್​​ಐಆರ್​ನಲ್ಲಿ ಪ್ರಭ ಅವರನ್ನು A-1 ಮಾಡಲಾಗಿದೆ. ಸಿದ್ದಪ್ಪ ಅನ್ನೋರು A2 ಆಗಿದ್ದಾರೆ. ದೂರಿನಲ್ಲಿ ಸ್ನೇಹಮಯಿ‌ ಕೃಷ್ಣ A4 ಆಗಿದ್ದಾರೆ. A3 ಆರೋಪಿ ಡಾಬಾ ಜಯಕುಮಾರ್ ಜೊತೆ ಸೇರಿ ಹಲ್ಲೆ ಮಾಡಲಾಗಿದೆ. ನನ್ನ ಹಿಡಿದು ಎಳೆದಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನನ್ನ ಹಾಗು ನನ್ನ ತಾಯಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಲಾವಣ್ಣ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

ನನ್ನ ವಿರುದ್ಧ ಮಹಿಳೆ ಮಾಡುತ್ತಿರುವುದು ಆರೋಪ ಸುಳ್ಳು ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ನನ್ನ ವಿರುದ್ಧ ಹಲವರು ಷಡ್ಯಂತ್ರ ಮಾಡುತ್ತಿದ್ದಾರೆ. ನಾನು ಜೈಲಿಗೆ ಹೋದರೂ ಸರಿ ಹೋರಾಟ ನಿಲ್ಲಿಸಲ್ಲ. ಆ ಮಹಿಳೆ ಮಾಡುತ್ತಿರುವ ಆರೋಪಗಳೆಲ್ಲ ಸುಳ್ಳು ಎಂದಿದ್ದಾರೆ.

ನಂಜನಗೂಡು ಪೊಲೀಸ್ ಠಾಣೆಯಲ್ಲಿ 2024 ಅಗಷ್ಟ 21 ರಂದು ಬಿಎನ್​ಎಸ್ 2023 ಅಡಿ ಪ್ರಕರಣ ದಾಖಲಾಗಿದೆ. U/s -85, 126(2), 74, 352, 351(2), 79, 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net