ಇಸಿಐ ನಿರ್ದೇಶನ, ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್​ಐಆರ್​ ದಾಖಲು

WhatsApp Image 2024-03-21 at 5.38.56 PM
Published on

ಬೆಂಗಳೂರು: ಇತ್ತೀಚೆಗಷ್ಟೇ ಬೆಂಗಳೂರಿನ ನಗರ್ತಪೇಟೆಯ ಅಂಗಡಿಯ ಯುವಕನ ಮೇಲೆ ನಡೆದ ಹಲ್ಲೆಯ ವಿರುದ್ಧ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, "ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ತಮಿಳುನಾಡಿನಿಂದ ಬಂದವರು ಇಲ್ಲಿ ಬಾಂಬ್ ಹಾಕುತ್ತಾರೆ, ದೆಹಲಿಯ ಜನರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗಳನ್ನು ಕೂಗ್ತಾರೆ ಮತ್ತು ಕೇರಳದಿಂದ ಬಂದವರು ಆಸಿಡ್ ದಾಳಿಯಲ್ಲಿ ಭಾಗಿಯಾಗಿದ್ದಾರೆ" ಎಂದು ಹೇಳಿಕೆ ನೀಡಿದ್ದರು.

ಈ ವಿವಾದಾತ್ಮಕ ಹೇಳಕೆಗೆ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಕ್ಷಮೆ ಕೋರಿದ ಶೋಭಾ ಕರಂದ್ಲಾಜೆ, ಹೇಳಿಕೆ ವಾಪಸ್ ಪಡೆದು ಬೇಷರತ್ ಕ್ಷಮೆಯಾಚಿಸಿದರು. ಕೇಂದ್ರ ಸಚಿವೆಯ ಹೇಳಿಕೆಗೆ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಖಂಡಿಸಿದ್ದು, ಚುನಾವಣಾ ಆಯೋಗ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇದೀಗ ಅದಕ್ಕೆ ಅನುಗುಣವಾಗುವಂತೆ ಇಸಿಐ ಕೇಂದ್ರ ಸಚಿವೆ ಹಾಗೂ ಉಡುಪಿ - ಚಿಕ್ಕಮಗಳೂರಿನ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್​ಐಆರ್​ ದಾಖಲಿಸುವಂತೆ ತಿಳಿಸಿತು.

ಇಸಿಐ ನಿರ್ದೇಶನದ ಮೇರೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಬೆಂಗಳೂರಿನ ಜಿಲ್ಲಾ ಚುನಾವಣಾಧಿಕಾರಿ ಅವರು ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮಾರ್ಚ್ 21ರ ಗುರುವಾರ ಎಫ್‌ಐಆರ್ ರಿಜಿಸ್ಟರ್​ ಮಾಡಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net