ಐಸಿಯು ವಾರ್ಡ್​ನಲ್ಲಿ ಅಗ್ನಿ ಅವಘಡ; ರೋಗಿಗಳು, ವೈದ್ಯರಲ್ಲಿ ಆತಂಕ

Fire
Published on

ಪುಣೆ: ಇಲ್ಲಿನ ಸರ್ದಾರ್​ ವಲ್ಲಭಭಾಯಿ ಪಟೇಲ್​ ಆಸ್ಪತ್ರೆಯ ಐಸಿಯು ವಾರ್ಡ್​ನಲ್ಲಿ ಬೆಂಕಿ ಹೊತ್ತಿಕೊಂಡ ಆತಂಕಕಾರಿ ಘಟನೆ ಇಂದು ಸಂಜೆ ನಡೆದಿದೆ.

ಮೂರು ಅಗ್ನಿಶಾಮಕ ದಳಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿವೆ. ಯಾವುದೇ ಸಾವುನೋವಿನ ವರದಿಯಾಗಿಲ್ಲ. ಆಗಸ್ಟ್​ನಲ್ಲಿ ಗುಜರಾತ್​​ನ ಅಹ್ಮದಾಬಾದ್​ನ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಅವಘಡ ಸಂಭವಿಸಿ ಸುಮಾರು ಎಂಟು ಮಂದಿ ಕರೊನಾ ರೋಗಿಗಳು ಮೃತಪಟ್ಟಿದ್ದರು. ಇದನ್ನೂ ಓದಿ: ಅರ್ಜೆಂಟೀನಾ ಕ್ರಿಕೆಟ್ ತಂಡದ ನಾಯಕಿ ಈಗ ಕರೊನಾ ವಾರಿಯರ್!

ಮಹಾರಾಷ್ಟ್ರದಲ್ಲಿ ಸದ್ಯ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ಈ ಮಧ್ಯೆ ಐಸಿಯು ವಾರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದಲ್ಲಿ ಶುಕ್ರವಾರ ಒಂದೇ ದಿನ 19,218 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿವೆ. ಇದು ಇಲ್ಲಿಯವರೆಗಿನ ಅಧಿಕ ಕೇಸ್​ ಆಗಿ ದಾಖಲೆಗೊಂಡಿದೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net