

ನವದೆಹಲಿ: ದೆಹಲಿಯ ಏಮ್ಸ್ ಆಸ್ಪತ್ರೆಯ ಎಂಡೋಸ್ಕೋಪಿ ಕೊಠಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಎಲ್ಲಾ ರೋಗಿಗಳನ್ನು ಶೀಘ್ರವೇ ಸ್ಥಳಾಂತರಿಸಲಾಗಿದೆ.
ದೆಹಲಿಯ ಏಮ್ಸ್‌ನ ತುರ್ತು ಚಿಕಿತ್ಸಾ ವಿಭಾಗದಲ್ಲಿ ದಿಢೀರ್ ಅಗ್ನಿ ಕಾಣಿಸಿಕೊಂಡಿದ್ದು, ಘಟನೆ ಇಂದು (ಆಗಸ್ಟ್ 7) ಬೆಳಿಗ್ಗೆ 11:54ರ ಸುಮಾರಿಗೆ ಸಂಭವಿಸಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವ ಕೆಲಸ ಮಾಡಿದ್ದು, ಇದೀಗ ಬೆಂಕಿಯ ತೀವ್ರತೆಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದೆ.
ಹಳೆ ಒಪಿಡಿ ಕಟ್ಟಡದ ಎರಡನೇ ಮಹಡಿಯಲ್ಲಿರುವ ಎಂಡೋಸ್ಕೋಪಿ ಕೊಠಡಿಯ ಬಳಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಎಲ್ಲಾ ರೋಗಿಗಳನ್ನು ಸ್ಥಳಾಂತರಗೊಳಿಸಿದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ,(ಏಜೆನ್ಸೀಸ್).