Video| Maha Kumbh ಮೇಳದಲ್ಲಿ ಮತ್ತೆ ಅಗ್ನಿ ಅವಘಡ

Maha Kumbh Fire Accident
Published on

ಪ್ರಯಾಗ್​ರಾಜ್​: ಮಹಾಕುಂಭಮೇಳ (Maha Kumbh Mela) ನಡೆಯುತ್ತಿರುವ ಸೆಕ್ಟರ್​ 18ರ ಶಂಕರಾಚಾರ್ಯ ಮಾರ್ಗದಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

ಮಹಾಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸುತ್ತಿರುವುದು ಇದೇ ಮೊದಲಲ್ಲ. ಜನವರಿ 19,20 ಹಾಗೂ 30ರಂದು ಸೆಕ್ಟರ್​ 16, 19, 22ರಲ್ಲಿ ಅಗ್ನಿ ಅವಘಡ ಸಂಭವಿಸಿತ್ತು.

ಚೌಕ್ ಪೊಲೀಸ್ ಠಾಣೆಯ ಅಧಿಕಾರಿ ಯೋಗೇಶ್ ಚತುರ್ವೇದಿ ಮಾತನಾಡಿ,ಅಗ್ನಿ ಅವಘಡದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಓಲ್ಡ್ ಜಿಟಿ ರಸ್ತೆಯ ತುಳಸಿ ಛೇದಕ ಬಳಿಯ ಶಿಬಿರದಲ್ಲಿ ಬೆಂಕಿ ಕಾಣಿಸಿಕೊಂಡಿದೆ . ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net