VIDEO | ನೋಡ ನೋಡುತ್ತಿದ್ದಂತೆ ಧಗಧಗನೆ ಹೊತ್ತಿ ಉರಿಯಿತು ಅಂಗಡಿ!

Untitled design - 2023-10-16T111241.278
Published on

ರಂಗಾರೆಡ್ಡಿ, ತೆಲಂಗಾಣ: ಸೋಮವಾರ (ಅ.16) ಅಂಗಡಿಯೊಂದರಲ್ಲಿ ದಿಢೀರ್​ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಮಾತ್ರದಲ್ಲಿ ಧಗಧಗನೆ ಹೊತ್ತಿ ಉರಿದ ದೃಶ್ಯ ಇದೀಗ ಸಾಮಾಜಿಕ ಜಾಲತಾಣ ಸೇರಿದಂತೆ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿದೆ. ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

"ಸೋಮವಾರ ಬೆಳಗ್ಗೆ 6:00 ಗಂಟೆಗೆ ವನಸ್ಥಲಿಪುರಂನಲ್ಲಿರುವ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ನಮಗೆ ಕರೆ ಬಂದಿತ್ತು. ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಆದ್ರೆ, ಇದು ಇನ್ನೂ ಖಚಿತವಾಗಿಲ್ಲ. ಶಾಲಾ, ಲಗೇಜ್ ಬ್ಯಾಗ್‌ಗಳು ಮತ್ತು ಇತರ ವಸ್ತುಗಳನ್ನು  ಮಾರಾಟ ಮಾಡುವ ಎರಡು ಶಟರ್ ಅಂಗಡಿಗೆ ಅಗ್ನಿ ತಗುಲಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ" ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಳಿಗೆಯಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕ ದಳ ಯಶಸ್ವಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಆಗಸ್ಟ್ 12 ರಂದು ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚಂದಾನಗರ ಪ್ರದೇಶದ ಮಾಲ್‌ನಲ್ಲಿ ಇದೇ ರೀತಿ ಬೆಂಕಿ ಕಾಣಿಸಿಕೊಂಡಿತ್ತು,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net