ಒಡಿಶಾ ರೈಲು ದುರಂತದ ಬೆನ್ನಲ್ಲೇ ಮತ್ತೊಂದು ಅವಘಡ; ಗೂಡ್ಸ್​ ವ್ಯಾಗನ್​ನಲ್ಲಿ ಬೆಂಕಿ

Goods Train
Published on

ಒಡಿಶಾ: ಒಡಿಶಾದ ಬಾಲೇಶ್ವರ ಜಿಲ್ಲೆಯ ರುಪ್ಸಾ ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್​ ಟ್ರೈನಿನ ವ್ಯಾಗನ್​ಗೆ ಬೆಂಕಿ ಹೊತ್ತಿಕೊಂಡು ಕೆಲ ಕಾಲ ಆತಂಕದ ವಾತವರಣ ನಿರ್ಮಾಣವಾಗಿತ್ತು.

ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಸಿ ವರದಿ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ಧಾರೆ.

ಒಡಿಶಾದ ಬಾಲಸೋರ್​ನಲ್ಲಿ ಜೂನ್ 2ರಂದು ಸಂಭವಿಸಿದ ತ್ರಿವಳಿ ರೈಲುಗಳ ಅಪಘಾತದಲ್ಲಿ 300ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು, ಒಂದು ಸಾವಿರಕ್ಕೂ ಹೆಚ್ಚಿನ ಜನ ಗಂಭೀರವಾಗಿ ಗಾಯಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net