

ಕರಾಚಿ: ಪಾಕಿಸ್ತಾನ ಸ್ಟಾಕ್ ಎಕ್ಸ್ ಚೇಂಜ್ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಹಿವಾಟನ್ನು ಸ್ಥಗಿತಗೊಳಿಸಲಾಗಿದೆ.
ಕರಾಚಿಯಲ್ಲಿರುವ ಕಚೇರಿ ಕಟ್ಟಡದ 4ನೇ ಮಹಡಿಯಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಅಲ್ಲಿನ ವ್ಯಾಪಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಬೆಂಕಿ ಅವಘಡ ಸಂಭವಿಸಿದ ಕಟ್ಟಡದಿಂದ ನೌಕರರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ವಿದ್ಯುತ್ ಸರ್ಕ್ಯೂಟ್‌ನಲ್ಲಿನ ದೋಷದಿಂದ ಬೆಂಕಿ ಸಂಭವಿಸಿರಬಹುದು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.