ಗುಜರಿ ಅಂಗಡಿಯಲ್ಲಿ ಬೆಂಕಿ ಅವಘಡ

Crime Logo
Published on

ಬೆಂಗಳೂರು: ಗುಜರಿ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ವಸ್ತುಗಳು ಸುಟ್ಟು ಹೋಗಿರುವ ಘಟನೆ
ಹೆಬ್ಬಾಳದ ಸುಲ್ತಾನ್‌ಪಾಳ್ಯ ಮುಖ್ಯರಸ್ತೆಯಲ್ಲಿರುವ ಗುಡ್ಡದಹಳ್ಳಿ ಸರ್ಕಲ್ ಬಳಿ ಗುರುವಾರ ಸಂಜೆ ನಡೆದಿದೆ.
ಗುಜರಿ ಅಂಗಡಿಯಲ್ಲಿ ಸಂಜೆ ೪ ಗಂಟೆಯ ವೇಳೆ ಈ ಅಗ್ನಿಅವಘಡ ಸಂಭವಿಸಿದ್ದು, ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದು ಎರಡು ವಾಹನಗಳೊಂದಿಗೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಎರಡು ಅಂಗಡಿಗಳು ಸುಟ್ಟು ಹೋಗಿದ್ದು, ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಸಂಬಂಧ ದೂರು ದಾಖಲಾಗಿಲ್ಲ ಎಂದು ಹೆಬ್ಬಾಳ ಪೊಲೀಸ್ ಠಾಣೆ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net