ಕರ್ತವ್ಯಲೋಪ ಎಸಗಿದ ವೈದ್ಯರ ವಜಾಗೊಳಿಸಿ

doctors
ಕರ್ತವ್ಯಲೋಪ ತೋರಿದ ವೈದ್ಯರ ವಜಾಕ್ಕೆ ಆಗ್ರಹಿಸಿ ಶಶಿಕುಮಾರ ಗೌಡ, ತೀರ್ಥನಾಯ್ಕ, ಸುನೀತಾ ರಾಜ್, ನಾಗರಾಜ ರಾವ್ ಶಿಂಧೆ, ರಶ್ಮಿ ಮುಂತಾದವರು ಪ್ರತಿಭಟನೆ ನಡೆಸಿದರು.
Published on

ಶಿವಮೊಗ್ಗ: ಭದ್ರಾವತಿಯ ಅಶ್ವತ್ಥನಗರ ಮತ್ತು ಉಜ್ಜನೀಪುರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು ಕರ್ತವ್ಯಲೋಪ ತೋರಿದ್ದು, ಅವರನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಮಂಗಳವಾರ ಡಿಎಚ್‌ಒ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಎರಡೂ ಆಸ್ಪತ್ರೆಗಳಲ್ಲಿ ಸರಿಯಾದ ಸಮಯಕ್ಕೆ ವೈದ್ಯರು, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವುದಿಲ್ಲ. ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ. ಇದರ ಬಗ್ಗೆ ಹಲವು ಬಾರಿ ಪ್ರತಿಭಟನೆ ನಡೆಸಿದರು ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಭದ್ರಾವತಿಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಿದೆ. ನಕಲಿ ಕ್ಲಿನಿಕ್‌ಗಳ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಸಾರ್ವಜನಿಕರಿಗೆ ಜೀವ ಭಯ ಕಾಡುತ್ತಿದೆ. ಕೂಡಲೇ ನಕಲಿ ವೈದ್ಯರ ಹಾವಳಿ ತಪ್ಪಿಸಬೇಕೆಂದು ಆಗ್ರಹಿಸಿದರು.
ಪ್ರಮುಖರಾದ ಸುನೀತಾ ರಾಜ್, ರಶ್ಮಿ, ನಾಗರಾಜ ರಾವ್ ಶಿಂಧೆ, ಹನುಮಂತ ನಾಯ್ಕ, ತೀರ್ಥನಾಯ್ಕ, ಅರುಣ ಕಾನಹಳ್ಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net