ಪ್ರಥಮ ಪಿಯುಸಿ: ಮಾರ್ಚ್ 30ಕ್ಕೆ ಫಲಿತಾಂಶ, ಮೇ ನಲ್ಲಿ ಪೂರಕ ಪರೀಕ್ಷೆ

result
Published on

ಬೆಂಗಳೂರು ಪ್ರಥಮ ಪಿಯುಸಿ ಪೂರಕ ಪರೀಕ್ಷೆ ಮೇ 20 ರಿಂದ 31ರವರೆಗೆ ನಡೆಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ (ಕೆಎಸ್‌ಇಎಬಿ) ವೇಳಾಪಟ್ಟಿ ಪ್ರಕಟಸಿದೆ.

ಪೂರಕ ಪರೀಕ್ಷೆ ನಡೆಸುವ ಸಂಪೂರ್ಣ ಜವಾಬ್ದಾರಿ ಜಿಲ್ಲಾ ಉಪನಿರ್ದೇಶಕರಿಗೆ ವಹಿಸಿದೆ. ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿಯನ್ನು ಮಂಡಳಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಮಾರ್ಚ್ 30ಕ್ಕೆ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ. ಆ ಸಮಯದಲ್ಲಿ ಪೂರಕ ಪರೀಕ್ಷೆಗೆ ಶುಲ್ಕ ಕಟ್ಟಲು ಅನುಕೂಲವಾಗುವಂತೆ ಕಾಲೇಜುಗಳ ಸೂಚನಾ ಫಲಕದಲ್ಲಿ ಪೂರಕ ಪರೀಕ್ಷೆಯ ವಿವರಗಳನ್ನು ಪ್ರಕಟಿಸುವಂತೆ ಕೆಎಸ್‌ಇಎಬಿ ಸೂಚನೆ ನೀಡಿದೆ.

ಪೂರಕ ಪರೀಕ್ಷೆಗೆ ಶುಲ್ಕ ಕಟ್ಟಲು ಏಪ್ರಿಲ್ 20 ಕೊನೆಯ ದಿನವಾಗಿದೆ. ಜೂ.6ರಂದು ಪರೀಕ್ಷೆಯ ಫಲಿತಾಂಶ ಪ್ರಕಟಿಸಬೇಕು ಎಂದು ಸೂಚಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net