ಮೂಲಸಂಸ್ಕೃತಿ ಆಚರಿಸಲು ಹಿಂಜರಿಕೆ ಬೇಡ : ರವಿಚಂದ್ರ ಬಾಯರಿ

amrutha
ಅಮೃತ ಭಾರತಿ ಪದವಿಪೂರ್ವ ಕಾಲೇಜು ಪುನಶ್ಚೇತನ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಅಮರೇಶ್ ಹೆಗ್ಡೆ ಉಪನ್ಯಾಸಕ ರವಿಚಂದ್ರ ಬಾಯರಿ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು
Published on

ಹೆಬ್ರಿ: ಬದಲಾಗಿರುವ ಕಾಲಘಟ್ಟದಲ್ಲಿ ನಮ್ಮ ಮೂಲ ಸಂಸ್ಕೃತಿ ಮರೆತು ಆಧುನಿಕತೆ ಭರಾಟೆಗೆ ಬಲಿಯಾಗಬಾರದು, ವಿಶ್ವದಲ್ಲಿಯೇ ಶ್ರೇಷ್ಠ ಸಂಸ್ಕಾರ, ಸಂಸ್ಕೃತಿಯನ್ನು ಹೊಂದಿರುವ ಭಾರತದ ಆಚರಣೆಗಳನ್ನು ಆಚರಿಸಲು ಯಾವುದೇ ಹಿಂಜರಿಕೆ ಬೇಡ ಎಂದು ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ರವಿಚಂದ್ರ ಬಾಯರಿ ಹೇಳಿದರು.

ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪುನಶ್ಚೇತನ ಕಾರ್ಯಕ್ರಮದಲ್ಲಿ ಭಾರತೀಯ ಸಂಸ್ಕೃತಿಯಲ್ಲಡಗಿರುವ ಜೀವನ ಪಾಠ ಬಗ್ಗೆ ಉಪನ್ಯಾಸ ನೀಡಿದರು.

ವಿದ್ಯಾರ್ಥಿಗಳು ಅತಿಥಿ ಸತ್ಕಾರ, ಭಾರತೀಯ ಉಡುಗೆ ತೊಡುಗೆಗಳು, ಆಹಾರ ಪದ್ಧತಿ, ಭಗವಂತನ ಮೂಲ ನಂಬಿಕೆ ಇದರಿಂದ ಯಶಸ್ಸಿನ ಬದುಕು ಸಾಧ್ಯ ಎಂದರು. ಪ್ರಾಂಶುಪಾಲರು ಅಮರೇಶ್ ಹೆಗ್ಡೆ, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಸುಹಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net