ಶಿವಾಜಿ ಪ್ರತಿಮೆ ಕುಸಿತ; ಪ್ರಧಾನಿ ಮೋದಿ ಮೊದಲ ಪ್ರತಿಕ್ರಿಯ ಹೀಗಿದೆ..

Untitled-design-1-2
Published on

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಶುಕ್ರವಾರ(ಆಗಸ್ಟ್​​​ 30) ಕ್ಷಮೆಯಾಚಿಸಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜರು ನಮಗೆ ಕೇವಲ ಹೆಸರಲ್ಲ, ಅವರು ನಮ್ಮ ಆರಾಧ್ಯ ದೈವ. ನಾನು ನನ್ನ ದೇವರು ಛತ್ರಪತಿ ಶಿವಾಜಿ ಮಹಾರಾಜರಲ್ಲಿ ತಲೆಬಾಗಿ ಕ್ಷಮೆಯಾಚಿಸುತ್ತೇನೆ. ನಮ್ಮ ಮೌಲ್ಯಗಳು ವಿಭಿನ್ನವಾಗಿವೆ. ಭಾರತ ಮಾತೆಯ ಮಹಾನ್ ಮಗ, ಈ ನೆಲದ ಮಗ ವೀರ್ ಸಾವರ್ಕರ್ ಅವರನ್ನು ನಿಂದಿಸುವ ಮತ್ತು ಅವಮಾನಿಸುವವರು ನಾವಲ್ಲ, ಅವರು ಕ್ಷಮೆ ಕೇಳಲು ಸಿದ್ಧರಿಲ್ಲ, ನ್ಯಾಯಾಲಯದ ಮೊರೆ ಹೋಗಿ ಹೋರಾಟಕ್ಕೆ ಸಿದ್ಧರಿದ್ದಾರೆ ಎಂದು ಹೇಳಿದರು.

ಬಿಜೆಪಿ ನನ್ನನ್ನು 2013ರಲ್ಲಿ ಪ್ರಧಾನಿ ಅಭ್ಯರ್ಥಿ ಎಂದು ಹೆಸರಿಸಿತ್ತು. ನಾನು ಮಾಡಿದ ಮೊದಲ ಕೆಲಸವೆಂದರೆ ರಾಯಗಢದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಸಮಾಧಿಯ ಮುಂದೆ ಭಕ್ತನಾಗಿ ಕುಳಿತು ಹೊಸ ಪ್ರಯಾಣವನ್ನು ಪ್ರಾರಂಭಿಸಿದ್ದಾಗಿ ತಿಳಿಸಿದರು.

ಕಡಲ ರಕ್ಷಣೆ ಮತ್ತು ಭದ್ರತೆಯಲ್ಲಿ, ಮರಾಠ ನೌಕಾಪಡೆ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಪರಂಪರೆಯನ್ನು ಗೌರವಿಸುವ ಉದ್ದೇಶದಿಂದ ಮೊದಲ ಬಾರಿಗೆ ಸಿಂಧುದುರ್ಗದಲ್ಲಿ ನಡೆದ ನೌಕಾಪಡೆಯ ದಿನಾಚರಣೆಯ ಅಂಗವಾಗಿ ಕಳೆದ ವರ್ಷ ಡಿಸೆಂಬರ್​​ 4ರಂದು ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು. ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್ ಕೋಟೆಯಲ್ಲಿ ಮರಾಠ ಯೋಧ ಛತ್ರಪತಿ ಶಿವಾಜಿ ಮಹಾರಾಜರ 35 ಅಡಿ ಎತ್ತರದ ಪ್ರತಿಮೆ ಕುಸಿದ ಬಳಿಕ ಪ್ರತಿಪಕ್ಷಗಳು ಬಿಜೆಪಿಯನ್ನು ಗುರಿಯಾಗಿಸಿ ಪ್ರಧಾನಿ ಮೋದಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. (ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net