'ಮೊದಲು ಸಿಪಿ ಯೋಗೇಶ್ವರ್​ನ್ನು ಸಚಿವ ಸ್ಥಾನದಿಂದ ತೆಗೆಯಿರಿ' ಅರುಣ್​ ಸಿಂಗ್​ ಬಳಿ ಐದು ಬೇಡಿಕೆಯಿತ್ತ ರೇಣುಕಾಚಾರ್ಯ

renuk
Published on

ಬೆಂಗಳೂರು: ರಾಜ್ಯದ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​ ಅವರ ಮುಂದೆ ಸಿಎಂ‌ ರಾಜಕೀಯ ಕಾರ್ಯದರ್ಶಿ ಎಂ.ಪಿ‌.‌ರೇಣುಕಾಚಾರ್ಯ ಐದು ಬೇಡಿಕೆಗಳನ್ನು ಇಟ್ಟಿದ್ದಾರೆ. ಪಕ್ಷದಲ್ಲೇ ಇದ್ದುಕೊಂಡು ಪಕ್ಷದ ವಿರುದ್ಧವಾಗಿ ದುಡಿಯುತ್ತಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಕೇಳಿಕೊಂಡಿದ್ದಾರೆ.

ಸಿಪಿ ಯೋಗೇಶ್ವರ್ ಎಲ್ಲ ಗೊಂದಲಗಳಿಗೆ ಸೂತ್ರಧಾರಿ. ಸರ್ಕಾರ ಹಾಗೂ ಪಕ್ಷದ ವರ್ಚಸ್ಸು ಹಾಳಾಗಲು ಅವರೇ ಕಾರಣ. ಮೊದಲು ಅವರನ್ನು ಸಚಿವ ಸ್ಥಾನದಿಂದ ತೆಗೆಯಿರಿ. ಸೋತಿರುವವರನ್ನು ಸಚಿವರನ್ನಾಗಿ ಮಾಡಲಾಗಿದೆ. ಪಕ್ಷದ ವಿರುದ್ಧ ಹೇಳಿಕೆ ನೀಡುವವರ ವಿರುದ್ಧ ಹೈಕಮಾಂಡ್ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಮೊದಲನೆಯದಾಗಿ ಅವರನ್ನು ಸಚಿವ ಸ್ಥಾನದಿಂದ ಕೈಬಿಡಿ. ಯತ್ನಾಳ್ ಹಾಗೂ ಬೆಲ್ಲದ್​ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು. ಯಡಿಯೂರಪ್ಪ ಅವರು ಇಲ್ಲದಿದ್ದರೆ ಪಕ್ಷವೇ ಇಲ್ಲ. ಸಂಕಷ್ಟದಲ್ಲಿರುವವರಿಗೆ ಒಂದು ಲಕ್ಷ ರೂಪಾಯಿ ನೆರವು ಘೋಷಣೆ ಮಾಡಿದ್ದಾರೆ. ಆದರೆ ಇಲ್ಲಿ ಪಕ್ಷದ ವಿರೋಧಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು. ಅಂತವರ ವಿರುದ್ಧ ಯಾವುದೇ ಸಾಫ್ಟ್ ಕಾರ್ನರ್​ ಬೇಡ ಎಂದು ರೇಣುಕಾಚಾರ್ಯ ಹಾಗೂ ಅವರ ತಂಡ ಅರುಣ್​ ಸಿಂಗ್​ ಅವರಲ್ಲಿ ಬೇಡಿಕೆ ಇಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net