'ಭಗವಂತ ಕೇಸರಿ' ಚಿತ್ರತಂಡದಿಂದ ಹೊರಬಿತ್ತು ಹೊಸ ಅಪ್ಡೇಟ್​!

Untitled design - 2023-08-29T171538.840
Published on

ಆಂಧ್ರಪ್ರದೇಶ: ತೆಲುಗು ಚಿತ್ರರಂಗದ ಹಿರಿಯ ನಟ ನಂದಮೂರಿ ಬಾಲಕೃಷ್ಣ ಅಭಿನಯದ 'ಭಗವಂತ ಕೇಸರಿ' ಚಿತ್ರದ ಬಗ್ಗೆ ಅಧಿಕೃತ ಮಾಹಿತಿಯೊಂದು ಲಭಿಸಿದೆ. ಚಿತ್ರದ ಮೊದಲ ಸಿಂಗಲ್​ ಅನ್ನು ಶೀಘ್ರವೇ ಬಿಡುಗಡೆಗೊಳಿಸಲಿದ್ದೇವೆ ಎಂದು ಚಿತ್ರತಂಡ ಈ ಹಿಂದೆಯೇ ತಿಳಿಸಿತ್ತು. ಅದರಂತೆಯೇ ಈಗ ಸಿನಿಮಾದ ಫುಲ್​ ಲಿರಿಕಲ್​ ಸಾಂಗ್​ ರಿಲೀಸ್​ ದಿನಾಂಕವನ್ನು ಕೂಡ ಪ್ರಕಟಿಸಿದೆ.

ಅನಿಲ್ ರವಿಪುಡಿ ನಿರ್ದೇಶನದಲ್ಲಿ ಮೂಡಿಬಂದಿರುವ 'ಭಗವಂತ ಕೇಸರಿ' ಚಿತ್ರದಲ್ಲಿ ಕಾಜಲ್ ಅಗರ್ವಾಲ್ ನಾಯಕಿಯಾಗಿ ಅಭಿನಯಿಸಿದ್ದು, ಬಹುಮುಖ ಪ್ರತಿಭೆ ನಟಿ ಶ್ರೀಲೀಲಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರ ತಯಾರಕರು ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಚಿತ್ರದ ಮೊದಲ ಸಿಂಗಲ್ ಗಣೇಶ್ ಹಾಡ​ನ್ನು ಸೆಪ್ಟೆಂಬರ್ 1, 2023 ರಂದು ಬಿಡುಗಡೆ ಮಾಡಲಾಗುವುದು ಎಂದು ಘೋಷಿಸಿದೆ.

ಬುಧವಾರ (ಆಗಸ್ಟ್​ 30) ಸಂಜೆ 04:05 ಕ್ಕೆ ಹಾಡಿನ ಪ್ರೋಮೋವನ್ನು ಬಿಡುಗಡೆಗೊಳಿಸಲು ಚಿತ್ರತಂಡ ಸಜ್ಜಾಗಿದೆ. ವಿಲನ್​ ಪಾತ್ರದಲ್ಲಿ ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಅಭಿನಯಿಸಿದ್ದು, ಶೈನ್ ಸ್ಕ್ರೀನ್ಸ್ ನಿರ್ಮಾಣದ ಭಗವಂತ ಕೇಸರಿ ಚಿತ್ರ ಅಕ್ಟೋಬರ್ 19, 2023 ರಂದು ಬಹುತೇಕ ಚಿತ್ರಮಂದಿರಗಳಲ್ಲಿ ರಿಲೀಸ್​ ಆಗಲಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net