

ಆಂಧ್ರಪ್ರದೇಶ: ತೆಲುಗು ಚಿತ್ರರಂಗದ ಹಿರಿಯ ನಟ, ನಂದಮೂರಿ ಬಾಲಕೃಷ ಎಂದೇ ಖ್ಯಾತರಾದ ಬಾಲಯ್ಯ ನಟನೆಯ ಬಹುನಿರೀಕ್ಷಿತ 'ಭಗವಂತ ಕೇಸರಿ' ಚಿತ್ರದ ಫಸ್ಟ್ ಲುಕ್ ರಿಲೀಸ್ ದಿನಾಂಕ ಮತ್ತು ಸಮಯವನ್ನು ಇದೀಗ ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ.
ಇದನ್ನೂ ಓದಿ: ಹಿಂದೂ ಅಸ್ಮಿತೆ ಮೇಲೆ ನಿರಂತರ ದಾಳಿ: ರಶ್ಮಿಸಮಂತ್
ಅನಿಲ್ ರವಿಪುಡಿ ನಿರ್ದೇಶನದ ಆ್ಯಕ್ಷನ್ ಜಾನರ್ನ 'ಭಗವಂತ ಕೇಸರಿ' ಚಿತ್ರದಲ್ಲಿ ರಗಡ್ ಲುಕ್ನಲ್ಲಿ ಕಾಣಿಸಿಕೊಂಡಿರುವ ಬಾಲಯ್ಯ ಅವರ ಅಭಿನಯವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ತುದಿಗಾಲಿನಲ್ಲಿ ಕಾಯುತ್ತಿದ್ದಾರೆ. ಈ ಹಿಂದೆಯೇ ನಿಗದಿಪಡಿಸಿದಂತೆ ಚಿತ್ರವು ಅಕ್ಟೋಬರ್ 19, 2023 ರಂದು ಬಹುತೇಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲು ಸಜ್ಜಾಗಿದೆ.
ಬಾಲಯ್ಯಗೆ ಜೋಡಿಯಾಗಿ ನಟಿ ಕಾಜಲ್ ಅಗರ್ವಾಲ್ ಅಭಿನಯಿಸಿದ್ದು, ಚಿತ್ರದ ಮೊದಲ ಹಾಡು ನಾಳೆ (ಆಗಸ್ಟ್ 24) ಸಂಜೆ 04:21ಕ್ಕೆ ಬಿಡುಗಡೆಯಾಗಲಿದೆ ಎಂದು ಚಿತ್ರ ತಯಾರಕರು ಅಧಿಕೃತವಾಗಿ ಘೋಷಿಸಿದ್ದಾರೆ. ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಥಮನ್ ಸಂಗೀತ ಸಂಯೋಜನೆ ಮಾಡಿದ್ದಾರೆ,(ಏಜೆನ್ಸೀಸ್).