ರೈಲು ಹಳಿಗಳಲ್ಲಿ ಈಜುತ್ತಿರುವ ಮೀನುಗಳು! ವಿಡಿಯೋ ನೋಡಿದ ನಂತರ ನೀವು ಆಶ್ಚರ್ಯಚಕಿತರಾಗುತ್ತೀರಿ...

fishes train
Published on

ಮುಂಬೈ: ಭಾರೀ ಮಳೆಯಿಂದಾಗಿ ಮುಂಬೈ ಜಲಾವೃತಗೊಂಡಿದೆ. ನಿರಂತರ ಮಳೆಯಿಂದಾಗಿ ಮುಂಬೈನ ಹಲವು ರಸ್ತೆಗಳು ಕೊಳಗಳಂತೆ ಕಾಣುತ್ತಿವೆ.  ಮಹಾರಾಷ್ಟ್ರ ಮತ್ತು ಮರಾಠವಾಡದಲ್ಲಿ ಬುಧವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಯಗಡದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದ್ದು, ಮುಂಬೈನಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ಮುಂಬೈ ಮತ್ತು ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ರಸ್ತೆಗಳು ಮತ್ತು ರೈಲು ಹಳಿಗಳಿಗೆ ಮಳೆ ನೀರು ಬಂದಿದೆ. ಭಾರೀ ಮಳೆಯಿಂದಾಗಿ, ಅನೇಕ ವಿಮಾನ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಅಂಧೇರಿ ರೈಲು ನಿಲ್ದಾಣದ ವ್ಯಾಪ್ತಿಯ ರೈಲು ಹಳಿಗಳಿಗೆ ಮಳೆ ನೀರು ನುಗ್ಗಿದ್ದರಿಂದ ಆ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಗೊಂಡಿದೆ. ರೈಲು ಹಳಿಗಳ ನಡುವೆ ನೀರು ನಿಂತಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮೀನುಗಳು ನೀರಿಗೆ ನುಗ್ಗಿವೆ.

ರೈಲು ಹಳಿಗಳ ಮೇಲೆ ನಿಂತಿದ್ದ ನೀರಿನಲ್ಲಿ ಮೀನುಗಳು ಈಜುತ್ತಿರುವುದನ್ನು ಕೆಲವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇದೀಗ ಆ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ವಿಡಿಯೋಗಳನ್ನು ನೋಡಿದ ನೆಟಿಜನ್‌ಗಳು ತಮ್ಮದೇ ಶೈಲಿಯಲ್ಲಿ ತಮಾಷೆಯ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net