ವರ ಸೇರಿ 45 ಜನರನ್ನು ಕರೆದೊಯ್ಯುತ್ತಿದ್ದ ಲಾರಿ ಪಲ್ಪಿ: ಐವರ ಸಾವು

Accident
Published on

ಭೋಪಾಲ್: ವರ ಸೇರಿ ಸುಮಾರು 45ಕ್ಕೂ ಅಧಿಕ ಜನರನ್ನು ಕರೆದೊಯ್ಯುತ್ತಿದ್ದ ಲಾರಿಯೊಂದು ಪಲ್ಪಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿ, 36 ಜನರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಶಹದೋಲ್​ ಜಿಲ್ಲೆಯಲ್ಲಿ ನಡೆದಿದೆ.

ಶುಕ್ರವಾರ ರಾತ್ರಿ ಇಲ್ಲಿನ ದೋಲಾರ್​ ಗ್ರಾಮದಿಂದ ದೋಲ್​​ ಗ್ರಾಮಕ್ಕೆ ಮದುವೆ ಸಮಾರಂಭಕ್ಕೆ ಲಾರಿಯಲ್ಲಿ ವರ ಹಾಗೂ ಕುಟುಂಬಸ್ಥರು ತೆರಳುತ್ತಿದ್ದರು. ಆದರೆ, ಚಾಲಕ ವಾಹನವನ್ನು ವೇಗವಾಗಿ ಚಲಾಯಿಸಿದ ಪರಿಣಾಮ ಆತನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.

ಇದರಿಂದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಉಳಿದ 36 ಜನ ಗಾಯಾಳುಗಳ ಪೈಕಿ 10 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net