ನಕಲಿ ಮದ್ಯ ಸೇವಿಸಿ ಐವರ ಮೃತ್ಯು; ನಾಲ್ವರು ಪೊಲೀಸ್​ ಅಧಿಕಾರಿಗಳ ಅಮಾನತು

Crime
Published on

ಚೆನ್ನೈ: ನಕಲಿ ಮದ್ಯ ಸೇವಿಸಿದ ಕಾರಣ ಓರ್ವ ಮಹಿಳೆ ಸೇರಿದಂತೆ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿನ ವಿಲ್ಲುಪುರಂನಲ್ಲಿ ನಡೆದಿದೆ.

ಘಟನೆ ಸಂಬಂಧ ನಾಲ್ವರು ಪೊಲೀಸ್​ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಿ ಸಿಎಂ ಸ್ಟಾಲಿನ್ ಆದೇಶ ಹೊರಡಿಸಿದ್ದಾರೆ.

ನಕಲಿ ಮದ್ಯ ಸೇವನೆ

ಮೃತ ಐವರು ನಕಲಿ ಮದ್ಯ ಸೇವಿಸಿದ ಕಾರಣ ಶನಿವಾರ ತಡರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಮೂವರು ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.

ಭಾನುವಾರ ಸಮಜೆ ಮಹಿಳೆ ಸೇರಿದಂತೆ ಇನ್ನಿಬ್ಬರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಓರ್ವನನ್ನು ವಶಕ್ಕೆ ಪಡೆಯಲಾಗಿದ್ದು ಪ್ರಕರಣ ಸಂಬಂಧ ಮತ್ತಷ್ಟು ಜನರ ಬಂಧನವಾಗುವ ಸಾಧ್ಯತೆ ಇದೆಎಂದು ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ತಿಳಿಸಿದ್ಧಾರೆ.

ನಾಲ್ವರು ಅಧಿಕಾರಿಗಳ ಅಮಾನತು

ಈ ಕುರಿತು ಪ್ರತಿಕ್ರಿಯಿಸಿರುವ ತಮಿಳುನಾಡು ಸಿಎಂ ಸ್ಟಾಲಿನ್​ ನಕಲಿ ಮದ್ಯ ಹಾಗೂ ಡ್ರಗ್ಸ್​ ನಿರ್ಮೂಲನೆಗೆ ನಮ್ಮ ಸರ್ಕಾರ ಆದ್ಯತೆ ನೀಡಿದ್ದು ಘಟನೆ ಸಂಬಂಧ ನಾಲ್ವರು ಪೊಲೀಸ್​ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರದ ವತಿಯಿಂದ ಕೊಡಲಾಗುವುದು ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net