

ರಾಂಚಿ: ಜಾರ್ಖಂಡ್ನ ಬೊಕಾರೊ-ರಾಮ್ಗಢ ರಾಷ್ಟ್ರೀಯ ಹೆದ್ದಾರಿಯಲ್ಲಿಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಐವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಬೊಕಾರೊ ಜಿಲ್ಲೆಯ ದಾಂಟು ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ಕೊಡಲಾಗುತ್ತಿದೆ.
ಅಪಘಾತಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ವೈದ್ಯಕೀಯ ಅಧಿಕಾರಿ ಡಾ ಸ್ವೀಟಿ ಭಗತ್, ನಸುಕಿನ ಜಾವ ಅಪಘಾತದ ಸಂಭವಿಸಿದ್ದು, ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಗೊಂಡವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದ್ದು, ಓರ್ವರ ಸ್ಥಿತಿ ಚಿಂತಾಜನಕವಾಗಿದೆ. ಎಂದು ವೈದ್ಯಕೀಯ ಅಧಿಕಾರಿ ಡಾ ಸ್ವೀಟಿ ಭಗತ್ ಮಾಹಿತಿ ನೀಡಿದ್ದಾರೆ.