ಪಟಾಕಿ ಅಂಗಡಿಯಲ್ಲಿ ಅಗ್ನಿ ದುರಂತ; ಹತ್ತು ಮಂದಿಗೆ ಗಾಯ, ಕನಿಷ್ಠ ಐವರ ಸಾವು!?

ಪಟಾಕಿ ಅಂಗಡಿಯೊಂದರಲ್ಲಿ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ಜ್ವಾಲೆ... #Fire #FirecrackerShop #TamilNadu - youtube
Published on

ತಮಿಳುನಾಡು: ಪಟಾಕಿ ಅಂಗಡಿಯೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಈ ಅವಘಡದಲ್ಲಿ ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಕನಿಷ್ಠ ಐವರು ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯ ಶಂಕರಪುರಂ ಎಂಬಲ್ಲಿನ ಪಟಾಕಿ ಅಂಗಡಿಯೊಂದರಲ್ಲಿ ಸಂಜೆಯ ಬಳಿಕ ಇಂಥದ್ದೊಂದು ಅಗ್ನಿಅನಾಹುತ ಸಂಭವಿಸಿದೆ.

ಇದ್ದಕ್ಕಿದ್ದಂತೆ ಸ್ಫೋಟಗೊಂಡು ಬೆಂಕಿಯ ಕೆನ್ನಾಲಗೆ ಹೊರಹೊಮ್ಮಿದ್ದು, ಮುಗಿಲುಮುಟ್ಟುವ ರೀತಿಯಲ್ಲಿ ಬೆಂಕಿ ಧಗಧಗಿಸಿ ಉರಿದಿದೆ. ಘಟನೆಯಲ್ಲಿ ಐವರು ಸತ್ತಿದ್ದಾರೆ ಎನ್ನಲಾಗಿದ್ದು, ಸತ್ತವರ ಸಂಖ್ಯೆ ಇನ್ನೂ ಹೆಚ್ಚಾಗಿರುವ ಸಾಧ್ಯತೆಯೂ ಇದೆ. ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಈ ಘಟನೆಯಲ್ಲಿ ಒಂದು ಬೈಕ್​ ಕೂಡ ಹೊತ್ತಿ ಉರಿದಿದೆ. ಘಟನೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಸಾವು-ನೋವುಗಳ ನಿಖರ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ. ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಕಾರ್ಯಾಚರಣೆ ಆರಂಭಿಸಿದ್ದು, ಬೆಂಕಿ ನಂದಿಸುವ ಕೆಲಸ ಇನ್ನೂ ಜಾರಿಯಲ್ಲಿದೆ. ಉರಿಯುತ್ತಿರು ಜ್ವಾಲೆಯನ್ನು ಸಂಪೂರ್ಣವಾಗಿ ಹತೋಟಿಗೆ ತರಲು ಅಗ್ನಿಶಾಮಕ ಸಿಬ್ಬಂದಿ ಸೆಣಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net