

ರಾಂಚಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಾರ್ಖಂಡ್ನ ರಿದಿಹ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ಗಂಭಿರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಗಿರಿದಿಹ್ ಸದರ್ ಉಪವಿಭಾಗೀಯ ಪೊಲೀಸ್ ಅಧಿಕಾರಿ ಅನಿಲ್ ಸಿಂಗ್, ಟಿಕೋಡಿಹ್ನಲ್ಲಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಬೆಳಗಿನ ಜಾವ 3 ಘಂಟೆ ಸುಮಾರಿಗೆ ವಾಪಸ್ ಆಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿದ್ದೆ ಮಂಪರಿನಲ್ಲಿ ವಾಹನ ಚಾಲನೆ ಮಾಡಿದ ಪರಿಣಾಮ ದುರ್ಘಟನೆ ಸಂಭವಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಶೀಘ್ರದಲ್ಲೇ ಮತ್ತಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ಗಿರಿದಿಹ್ ಸದರ್ ಉಪವಿಭಾಗೀಯ ಪೊಲೀಸ್ ಅಧಿಕಾರಿ ಅನಿಲ್ ಸಿಂಗ್ ತಿಳಿಸಿದ್ದಾರೆ.