

ಮದ್ದೂರು: ಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ವಿವಿಧ ಭಾಗಗಳಲ್ಲಿ ಅಳವಡಿಸಿದ್ದ ಫ್ಲೆಕ್ಸ್‌ಗಳನ್ನು ಪುರಸಭೆ ಮುಖ್ಯಾಧಿಕಾರಿ ಕರಿಬಸವಯ್ಯ ನೇತೃತ್ವದಲ್ಲಿ ಗುರುವಾರ ತೆರವುಗೊಳಿಸಲಾಯಿತು.
ಪುರಸಭೆ ಮುಖ್ಯ ಅಧಿಕಾರಿ ಕರಿಬಸವಯ್ಯ ಮಾತನಾಡಿ, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾರಿ ಗಾತ್ರದ ಫ್ಲೆಕ್ಸ್‌ಗಳನ್ನು ಹಾಕಿರುವುದರಿಂದ ಅಪಘಾತಗಳು ಸಂಭವಿಸುತ್ತವೆ ಎಂದು ಪೊಲೀಸರು ಹಾಗೂ ಪುರಸಭಾ ಆಡಳಿತಾಧಿಕಾರಿಯಾಗಿದ್ದ (ಉಪ ವಿಭಾಗಧಿಕಾರಿ ಶಿವಮೂರ್ತಿ) ಪುರಸಭೆಗೆ ತಿಳಿಸಿದ್ದರು. ಆದ್ದರಿಂದ ಹೆದ್ದಾರಿ ಹಾಗೂ ಪುರಸಭೆಯ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಹಾಕಿರುವ ಎಲ್ಲಾ ರೀತಿಯ ಫ್ಲೆಕ್ಸ್‌ಗಳನ್ನು ಸಾರ್ವಜನಿಕರ ಹಿತದೃಷ್ಠಿದಿಂದ ತೆರವುಗೊಳಿಸಲಾಗುತ್ತಿದೆ ಇದಕ್ಕೆ ಪ್ರತಿಯೊಬ್ಬರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಪುರಸಭೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕಂದಾಯ ಅಧಿಕಾರಿಗಳು ಇದ್ದರು.