ಕಲಬುರಗಿ ನಗರದ ಗುಲ್ಬರ್ಗ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ವಿಶ್ವ ಜಾನಪದ ದಿನಾಚರಣೆಯನ್ನು ಸೆ.೮ ರಂದು ಆಯೋಜಿಸಲಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಸಿ.ಎಸ್.ಮಾಲಿಪಾಟೀಲ್ ತಿಳಿಸಿದ್ದಾರೆ. ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಡಾ.ಎಚ್.ಟಿ.ಪೋತೆ ಉದ್ಘಾಟಿಸುವರು. ಸಾಹಿತಿ ಹಾಗೂ ಹೋರಾಟಗಾರ್ತಿ ಡಾ.ಮೀನಾಕ್ಷಿ ಬಾಳಿ ವಿಶೇಷ ಉಪನ್ಯಾಸ ನೀಡುವರು. ಮಕ್ಕಳ ಸಾಹಿತಿ ಎ.ಕೆ.ರಾಮೇಶ್ವರ ಮುಖ್ಯ ಅತಿಥಿಳಾಗಿರುವರು. ಗಿರಿಜಾ ಕರ್ಪೂರ ಅವರಿಂದ ಜನಪದ ಗೀತ ಗಾಯನ ನಡೆಯಲಿದೆ.