ಕಡಿಮೆ ಫಲಿತಾಂಶ ಬಂದ ಶಾಲೆಗಳತ್ತ ಗಮನ ಹರಿಸಿ

1059568
ಪಿರಿಯಾಪಟ್ಟಣ ತಾಲೂಕು ಹಂಡಿತವಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಕಡಿಮೆ ಫಲಿತಾಂಶಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಪ್ರಸನ್ನ ಅವರಿಂದ ವಿವರಣೆ ಪಡೆಯುತ್ತಿರುವ ಸಚಿವ ಕೆ ವೆಂಕಟೇಶ್.
Published on

ರಾವಂದೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಬಂದಿರುವ ಶಾಲೆ ಕಡೆ ಹೆಚ್ಚು ಗಮನ ಹರಿಸಬೇಕೆಂದು ಸಚಿವ ಕೆ.ವೆಂಕಟೇಶ್ ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಪ್ರಸನ್ನ ಅವರಿಗೆ ಸೂಚಿಸಿದರು.

ಪಿರಿಯಾಪಟ್ಟಣ ತಾಲೂಕು ಹಂಡಿತವಳ್ಳಿ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿದ ಬಳಿಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಹಂಡಿತವಳ್ಳಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿ ಕಡಿಮೆ ಫಲಿತಾಂಶ ಬಂದಿದ್ದು ಈ ಫಲಿತಾಂಶಕ್ಕೆ ಶಿಕ್ಷಕರ ಬೇಜವಾಬ್ದಾರಿಯೇ ಕಾರಣ ಎಂದು ಗ್ರಾಮಸ್ಥರು ಸಚಿವರಿಗೆ ದೂರಿದರು.

ರಾವಂದೂರು, ಹಾರನಹಳ್ಳಿ ಕೆಪಿಎಸ್ ಶಾಲೆ, ಜಿಜೆಸಿ ಪಿರಿಯಾಪಟ್ಟಣ, ಕಂಪಲಾಪುರ, ದೊಡ್ಡ ಕಮರವಳ್ಳಿ ಈ ಸರ್ಕಾರಿ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಕಡಿಮೆ ಬರಲು ಇಲ್ಲಿನ ಶಿಕ್ಷಕರ ಬೇಜವಾಬ್ದಾರಿಯೇ ಕಾರಣವಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ಶಾಲೆಗಳ ಕಡೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ಚು ಗಮನ ಹರಿಸಬೇಕು. ಗಮನ ಹರಿಸದೆ ಹೋದಲ್ಲಿ ಇವರ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು. ಕೆಲವು ಶಾಲೆಗಳಲ್ಲಿ ಶಿಕ್ಷಕರು ತಮ್ಮ ಮಕ್ಕಳಿಗೆ ಶಿಕ್ಷಣ ನೀಡದೆ ರಾಜಕೀಯ, ಬಡ್ಡಿ ವ್ಯವಹಾರಗಳನ್ನು ಮಾಡಿಕೊಂಡು ಕಾಲಹರಣ ಮಾಡುತ್ತಿದ್ದಾರೆ. ಇಂತಹವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಗ್ರಾಮದ ಅಭಿವೃದ್ಧಿಗೆ ಹಂತಹಂತವಾಗಿ ಅನುದಾನ ನೀಡುವ ಮೂಲಕ ಸಂಪೂರ್ಣ ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.

ತಹಸೀಲ್ದಾರ್ ನಿಸರ್ಗಾ ಪ್ರಿಯಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಸುನಿಲ್‌ಕುಮಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಮೈಮುಲ್ ನಿರ್ದೇಶಕ ಪ್ರಕಾಶ್, ಗ್ರಾಪಂ ಅಧ್ಯಕ್ಷ ರಾಜೇಗೌಡ, ಗೌರಮ್ಮ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್, ಪಶುವೈದ್ಯಕೀಯ ಮತ್ತು ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಸೋಮಯ್ಯ, ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ವೆಂಕಟೇಶ್, ದಿನೇಶ್, ಹಾರಂಗಿ ಏತ ನೀರಾವರಿ ಇಲಾಖೆ ಎಎಇಗಳಾದ ರಂಗಯ್ಯ, ನವೀನ್‌ಕುಮಾರ್, ನಿರ್ಮಿತಿ ಕೇಂದ್ರದ ಅಧಿಕಾರಿಗಳಾದ ಲವಕುಮಾರ್, ಅಹಮ್ಮದ್, ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಮಲ್ಲಿಕಾರ್ಜುನ್, ವಲಯ ಅರಣ್ಯಾಧಿಕಾರಿ ಪದ್ಮಿನಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಸಿ. ಪ್ರಶಾಂತ್, ತೋಟಗಾರಿಕಾ ಇಲಾಖೆ ಸಹಾಯಕ ಅಧಿಕಾರಿ ಪ್ರಸಾದ್, ರೇಷ್ಮೆ ಇಲಾಖೆ ಸಹಾಯಕ ಅಧಿಕಾರಿ ಚಂದ್ರೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ.ಸ್ವಾಮಿ, ರಹಮತ್‌ಜಾನ್ ಬಾಬು, ಮುಖಂಡರಾದ ರಾಜಶೇಖರ್, ಜವರಪ್ಪ, ಡಿ.ಎಸ್.ನಂದೀಶ್ , ಕೀರ್ತಿ ಮಂಜುನಾಥ್‌ಕುಮಾರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net