ಅರವಿಂದ್ ಕೇಜ್ರಿವಾಲ್​​ಗೆ ಮಧ್ಯಂತರ ಜಾಮೀನು; ಸುಪ್ರೀಂ ಕೋರ್ಟ್​ ಹಾಕಿದ 5 ಷರತ್ತುಗಳೇನು ಗೊತ್ತಾ?

cm
Published on

ದೆಹಲಿ: ಪ್ರಸಕ್ತ ಸಾಗುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ನಡೆಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್​ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜೂನ್ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜೂನ್​ 2ರಂದು ಜೈಲಿಗೆ ಶರಣಾಗಬೇಕು ಎಂದು ಹೇಳಿದೆ.

ದೆಹಲಿ ಮದ್ಯನೀತಿ ಹಗರಣದ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಣ ವರ್ಗಾವಣೆ ಆರೋಪದಲ್ಲಿ ಕ್ರೇಜಿವಾಲ್​ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಲೋಕಸಭೆ ಚುನಾವಣೆ ಸಮಯದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ನ್ಯಾಯಮೂರ್ತಿಗಾಳದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತಾ ಅವರಿದ್ದ ಪೀಠ ಸೂಚಿಸಿದೆ.

ಜಾಮೀನು ಸಿಕ್ಕ ನಂತರ ಕೇಜ್ರಿವಾಲ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಜೈಲಿನಿಂದ ಹೊರಬಂದ ನಂತರ ಕೇಜ್ರಿವಾಲ್ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಬಹುದು ಮತ್ತು ಪತ್ರಿಕಾಗೋಷ್ಠಿ ನಡೆಸಬಹುದು. ಇದರ ಜೊತೆಗೆ ಜೈಲಿನಿಂದ ಹೊರ ಬಂದ ಬಳಿಕ ವಿಧಿಸಿದ ಕಠಿಣ ಷರತ್ತುಗಳ ಪಟ್ಟಿ ಇಲ್ಲಿದೆ.

ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ವಿಧಿಸಿದ 5 ಜಾಮೀನು ಷರತ್ತುಗಳು

1. ಮುಖ್ಯಮಂತ್ರಿ ಕಚೇರಿ ಮತ್ತು ದೆಹಲಿ ಸಚಿವಾಲಯಕ್ಕೆ ಭೇಟಿ ನೀಡುವುದನ್ನು ನಿಷೇಧಿಸಲಾಗಿದೆ.

2. ದೆಹಲಿಯ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ವಿಕೆ ಸಕ್ಸೇನಾ ಅವರ ಅನುಮತಿ/ಅನುಮೋದನೆ ಪಡೆಯಲು ಅಗತ್ಯ ಮತ್ತು ಅಗತ್ಯವಿದ್ದಲ್ಲಿ ಅಧಿಕೃತ ಕಡತಗಳಿಗೆ ಸಹಿ ಹಾಕುವುದಿಲ್ಲ ಎಂದು ಅವರ ಪರವಾಗಿ ಮಾಡಿದ ಹೇಳಿಕೆಗೆ ಅವರು ಬದ್ಧರಾಗಿರಬೇಕು.

3. ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆಗಳನ್ನು ನೀಡದಂತೆ ಸೂಚನೆ ನೀಡಲಾಗಿದೆ.

4. ದೆಹಲಿ ಮದ್ಯದ ನೀತಿ ಹಗರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳ ಜೊತೆ ಮಾತುಕತೆ ನಡೆಸಬಾರದು.

4. ದೆಹಲಿ ಮುಖ್ಯಮಂತ್ರಿ ಕ್ರೇಜಿವಾಲ್​ 50,000 ರೂ. ಮೌಲ್ಯದ ಬೇಲ್‌ ಬಾಂಡ್‌ಗಳನ್ನು ಒದಗಿಸಬೇಕು.

5. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಬಹಿರಂಗ ಹೇಳಿಕೆಗಳನ್ನು ನೀಡಬಾರದು.

ಚುನಾವಣಾ ಫಲಿತಾಂಶ ಜೂನ್ 4 ರಂದು ಪ್ರಕಟಗೊಳ್ಳಲಿದೆ ಅಲ್ಲಿವರೆಗೂ ಜಾಮೀನು ವಿಸ್ತರಿಸಬೇಕು ಎಂದು ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಮನುಸಿಂಘ್ವಿ ಮನವಿ ಮಾಡಿದರು. ಇದಕ್ಕೆ ನಿರಾಕರಿಸಿದ ಕೋರ್ಟ್, ಕಡೆಯ ಹಂತದ 48 ಗಂಟೆಗೂ ಮುನ್ನ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಜೂನ್ 31 ರ ಪ್ರಚಾರಕ್ಕೆ ಕಡೆಯ ದಿನವಾಗಿದ್ದು ಈ ಹಿನ್ನೆಲೆ ಜೂನ್ 1 ವರೆಗೂ ಜಾಮೀನು ಮಂಜೂರು ಮಾಡಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿತು. ಅಲ್ಲದೇ ಜೂನ್‌ 2 ರಂದು ಬಂದು ಶರಣಾಗುವಂತೆ ಕೋರ್ಟ್‌ ಸೂಚಿಸಿದೆ.

ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು, ಏಪ್ರಿಲ್ 1 ರಿಂದ ಇಲ್ಲಿಯವರೆಗೆ ತಿಹಾರ್ ಜೈಲಿನಲ್ಲಿ ಅವರನ್ನು ಇರಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net