ಸಿಎಆರ್,ಡಿಎಆರ್ ಕಾನ್‌ಸ್ಟೆಬಲ್ ನೇಮಕಾತಿ; ಡಿ.10ಕ್ಕೆ ಲಿಖಿತ ಪರೀಕ್ಷೆ

police
Published on

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,064 ಸಶಸ ಕಾನ್‌ಸ್ಟೆಬಲ್ (ಸಿಎಆರ್/ಡಿಎಆರ್) ಹುದ್ದೆಗಳ ನೇಮಕಾತಿಗೆ ಡಿಸೆಂಬರ್ 10ಕ್ಕೆ ಲಿಖಿತ ಪರೀಕ್ಷೆಗೆ ಪೊಲೀಸ್ ಇಲಾಖೆ ದಿನಾಂಕ ನಿಗದಿ ಮಾಡಿದೆ.

ರಾಜ್ಯದ 36 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಸಲು ಪೊಲೀಸ್ ನೇಮಕಾತಿ ಅಧಿಕಾರಿಗಳು ಸಜ್ಜಾಗುತ್ತಿದ್ದಾರೆ. ಅಂದಾಜು 3,18,900 ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ.

ಇದಕ್ಕಾಗಿ ಬೇಕಾದ ಪರೀಕ್ಷಾ ಕೊಠಡಿಗಳ ಮಾಹಿತಿ ಪಡೆದು ಅಗತ್ಯ ಸೌಲಭ್ಯಗಳನ್ನು ಕಲ್ಪಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net