3064 ಸಶಸ್ತ್ರ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ; ಜನವರಿ 28ಕ್ಕೆ ಲಿಖಿತ ಪರೀಕ್ಷೆ

Police
Published on

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಕಾನ್‌ಸ್ಟೆಬಲ್ (ಸಿಎಆರ್,ಡಿಎಆರ್) 3064 ಹುದ್ದೆಗಳ ನೇಮಕಾತಿಗೆ ಜ.28ರಂದು ಲಿಖಿತ ಪರೀಕ್ಷೆ ನಡೆಸಲು ಪೊಲೀಸ್ ನೇಮಕಾತಿ ವಿಭಾಗ ನಿರ್ಧರಿಸಿದೆ.

2022-23ನೇ ಸಾಲಿನಲ್ಲಿ ಮಿಕ್ಕುಳಿದ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಸಲು ಎಲ್ಲ ಘಟಕಗಳಿಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ನ.8ರ ಒಳಗಾಗಿ ಪರೀಕ್ಷಾ ಕೇಂದ್ರಗಳ ವಿವರಗಳನ್ನು ಕಳುಹಿಸುವಂತೆ ಎಲ್ಲ ಘಟಕ ಮುಖ್ಯಸ್ಥರಿಗೆ ಪೊಲೀಸ್ ನೇಮಕಾತಿ ವಿಭಾಗ ಡಿಐಜಿಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net