Forbes India Richest List 2023: ಮೊದಲ ಸ್ಥಾನದಲ್ಲಿ ಉದ್ಯಮಿ ಮುಖೇಶ್ ಅಂಬಾನಿ

Mukesh Ambani
Published on

ನವದೆಹಲಿ:  ಹುರೂನ್‌ ಇಂಡಿಯಾ ಸಂಸ್ಥೆ ಭಾರತದ ಶ್ರೀಮಂತರ ಪಟ್ಟಿ ಬಿಡುಗಡೆ ಮಾಡಿದ್ದು,  ಭಾರತದ ಶ್ರೀಮಂತ ವ್ಯಕ್ತಿಗಳ 12 ನೇ ವಾರ್ಷಿಕ ಶ್ರೇಯಾಂಕವನ್ನು ಬಿಡುಗಡೆ ಮಾಡಿದೆ. ರಿಲಯನ್ಸ್ ಇಂಡಸ್ಟ್ರೀಸ್‌ನ ಚೇರ್ಮನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಮುಖೇಶ್ ಅಂಬಾನಿ ಅವರು 2023 ರ ಫೋರ್ಬ್ಸ್ ಭಾರತದ 100 ಶ್ರೀಮಂತರ ಪಟ್ಟಿಯಲ್ಲಿ  ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ರಿಲಯನ್ಸ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ಅವರು ಹುರುನ್ ಇಂಡಿಯಾ ರಿಚ್ ಲಿಸ್ಟ್ 2023 ರಲ್ಲಿ ಭಾರತದ ಶ್ರೀಮಂತ ವ್ಯಕ್ತಿ ಎಂಬ ಬಿರುದನ್ನು ಮರುಪಡೆದುಕೊಂಡಿದ್ದಾರೆ. ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರನ್ನು ಹಿಂದಿಕ್ಕಿದ್ದಾರೆ.

ಭಾರತದ ಟಾಪ್‌ 10 ಶ್ರೀಮಂತರು ಯಾರು?: ರಿಲಯನ್ಸ್‌ ಇಂಡಸ್ಟ್ರೀಸ್‌ನ ಮುಕೇಶ್‌ ಅಂಬಾನಿ 8.08 ಲಕ್ಷ ಕೋಟಿ ರೂ. ಆಸ್ತಿಯೊಂದಿಗೆ ದೇಶದ ನಂ.1 ಶ್ರೀಮಂತರಾಗಿ ಹೊರಹೊಮ್ಮಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಮುಕೇಶ್‌ ಅಂಬಾನಿ ಆಸ್ತಿಯಲ್ಲಿ ಶೇ.2.2ರಷ್ಟು ಮಾತ್ರವೇ ಏರಿಕೆಯಾಗಿದೆ. ಆದರೆ ಕಳೆದ ವರ್ಷದ ಮೊದಲ ಸ್ಥಾನದಲ್ಲಿದ್ದ ಗೌತಮ್‌ ಅದಾನಿ ಆಸ್ತಿ, ಹಿಂಡನ್‌ಬರ್ಗ್‌ ವರದಿ ಪ್ರಕಟ ಬಳಿಕ ಶೇ.57ರಷ್ಟು ಕುಸಿತ ಕಂಡು 4.74 ಲಕ್ಷ ಕೋಟಿಗೆ ಇಳಿದ ಪರಿಣಾಮ ಅವರು 2ನೇ ಸ್ಥಾನ ಪಡೆದುಕೊಂಡಿದ್ದಾರೆ.

ಉಳಿದಂತೆ ಪುಣೆ ಸೀರಂ ಇನ್‌ಸ್ಟಿಟ್ಯೂಟ್‌ ಮಾಲೀಕ ಸೈರಸ್‌ ಪೂನಾವಾಲಾ (2.78 ಲಕ್ಷ ಕೋಟಿ ರು.), ಎಚ್‌ಸಿಎಲ್‌ನ ಶಿವ ನಾಡಾರ್‌ (2.28 ಲಕ್ಷ ಕೋಟಿ ರು.), ಗೋಪಿಚಂದ್‌ ಹಿಂದೂಜಾ , ದಿಲೀಪ್‌ ಸಿಂಘ್ವಿ , ಲಕ್ಷ್ಮೀ ನಿವಾಸ್‌ ಮಿತ್ತಲ್‌ , ರಾಧಾಕೃಷ್ಣನ್‌ ದಮಾನಿ , ಕುಮಾರ ಮಂಗಳಂ ಬಿರ್ಲಾ , ನೀರಜ್‌ ಬಜಾಜ್‌ ಕ್ರಮವಾಗಿ 3ರಿಂದ 10 ಸ್ಥಾನ ಪಡೆದಿದ್ದಾರೆ. 138 ನಗರಗಳ 1319 ಶ್ರೀಮಂತರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಪ್ರಿಸಿಷನ್‌ ವೈರ್ಸ್‌ನ ಮುಖ್ಯಸ್ಥ ಮಹೇಂದ್ರ ರತಿಲಾಲ್‌ ತಮ್ಮ 94ನೇ ವಯಸ್ಸಿನಲ್ಲಿ ಸಿರಿವಂತರ ಪಟ್ಟಿ ಸೇರಿದ್ದರೆ, ಜೆಪ್ಟೋ ಸ್ಟಾರ್ಟಪ್‌ನ ಕೈವಲ್ಯ ವೋಹ್ರಾ (20 ವರ್ಷ) ಪಟ್ಟಿಯಲ್ಲಿ ಸ್ಥಾನ ಪಡೆದ ಅತಿ ಕಿರಿಯ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net