ನಿವೃತ್ತಿ ಸೌಲಭ್ಯ ಕಲ್ಪಿಸುವಂತೆ ಒತ್ತಾಯ

sgr retired
ಏಳನೇ ವೇತನ ಆಯೋಗದ ವರದಿ ಅನುಷ್ಠಾನದಲ್ಲಿ ನಿವೃತ್ತಿ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ನಿವೃತ್ತ ನೌಕರರ ವೇದಿಕೆ ಸ್ಥಳೀಯ ಘಟಕದ ಪದಾಧಿಕಾರಿಗಳು ಎಸಿ ಆರ್.ಯತೀಶ್ ಅವರಿಗೆ ಮನವಿ ಸಲ್ಲಿಸಿದರು. ಡಿ.ಗಣಪತಪ್ಪ, ವೈ.ಮೋಹನ್, ಡಿ.ಕೆ.ಮೋಳೆ, ಕಲ್ಲಪ್ಪ ಮೆಣಸಿನಾಳ್ ಇತರರಿದ್ದರು.
Published on

ಸಾಗರ: ಏಳನೇ ವೇತನ ಆಯೋಗದ ಅನುಷ್ಠಾನದಲ್ಲಿ 2022ರ ಜು.1ರಿಂದ 2024ರ ಜು.31ರ ಅವಧಿಯಲ್ಲಿ ನಿವೃತ್ತರಾದ ಅಧಿಕಾರಿ ನೌಕರರಿಗೆ ಪರಿಷ್ಕೃತ ವೇತನ ಶ್ರೇಣಿಯಲ್ಲಿ ನಿವೃತ್ತಿ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ನಿವೃತ್ತ ನೌಕರರ ವೇದಿಕೆ ಸ್ಥಳೀಯ ಘಟಕದ ಪದಾಧಿಕಾರಿಗಳು ಉಪವಿಭಾಗಾಧಿಕಾರಿ ಆರ್.ಯತೀಶ್ ಅವರಿಗೆ ಮನವಿ ಸಲ್ಲಿಸಿದರು.

ಮೇಲ್ಕಂಡ ಅವಧಿಯಲ್ಲಿ ನಿವೃತ್ತರಾದ ಅಥವಾ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಅಥವಾ ಸೇವೆ ಸಮಾಪ್ತಿಗೊಂಡ ಪ್ರಕರಣಗಳಲ್ಲಿ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ನಿಗದಿಪಡಿಸಲಾದ ಕಾಲ್ಪನಿಕ ವೇತನವನ್ನು ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಲೆಕ್ಕ ಹಾಕುವ ಉದ್ದೇಶಗಳಿಗೆ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ನಿವೃತ್ತರಾದ, ನಿಧನ ಹೊಂದಿದ ಅಧಿಕಾರಿ ನೌಕರರಿಗೆ ಪರಿಷ್ಕೃತ ವೇತನದನ್ವಯ ಲೆಕ್ಕಾಚಾರ ಮಾಡದೇ ಹಳೆಯ ವೇತನ ಶ್ರೇಣಿಯ ಮೇಲೆ ಪರಿಗಣಿಸುತ್ತಿರುವುದು ಸರಿಯಲ್ಲ. ಆಗಸ್ಟ್ 24ರಿಂದ ನಿವೃತ್ತಿ ಹೊಂದುವ ಅಧಿಕಾರಿ ನೌಕರರು ಪರಿಷ್ಕೃತ ವೇತನದಲ್ಲಿ ನಿವೃತ್ತಿ ಆರ್ಥಿಕ ಸೌಲಭ್ಯ ಲಭ್ಯವಾಗುತ್ತಿದೆ. ಅದರಂತೆ ನಾವು ಸಹ 7ನೇ ವೇತನ ಆಯೋಗದ ವರದಿಯಂತೆ ಪರಿಷ್ಕೃತ ವೇತನದಲ್ಲಿ ನಿವೃತ್ತಿ ಸೌಲಭ್ಯ ಪಡೆಯುವ ಅರ್ಹತೆ ಹೊಂದಿದ್ದೇವೆ. ಆದ್ದರಿಂದ ಈ ಸಮಸ್ಯೆಯನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.
ಡಿ.ಗಣಪತಪ್ಪ, ವೈ.ಮೋಹನ್, ಡಿ.ಕೆ.ಮೋಳೆ, ಕಲ್ಲಪ್ಪ ಮೆಣಸಿನಾಳ್, ಗುರುರಾಜ, ಶಾರದಾ, ಸುದರ್ಶನ, ಮಹ್ಮದ್ ಅಲಿಬೇಗ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net