ಅಕ್ರಮ ದಾಖಲೆ ಸೃಷ್ಟಿ ಕ್ರಮಕ್ಕೆ ಒತ್ತಾಯ

munesh
ಡಿ.ಮುನೇಶ್
Published on

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ವಿವಿಧ ಗ್ರಾಮಗಳಲ್ಲಿ ಸರ್ಕಾರಿ ಜಮೀನು ಸಂಬಂಧ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಂಜೂರು ಮಾಡಿರುವ ಅಧಿಕಾರಿಗಳ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಮುಖಂಡ ಡಿ.ಮುನೇಶ್ ಒತ್ತಾಯಿಸಿದರು.

ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 150 ಕೋಟಿಗೆ ಅಧಿಕ ಬೆಲೆ ಬಾಳುವ ಜಮೀನನ್ನು ಭೂ ಗಳ್ಳರಿಗೆ ಅಧಿಕಾರಿಗಳು ಪರಭಾರೆ ಮಾಡಿದ್ದಾರೆ. ಈ ಕೆಲಸದಲ್ಲಿ ಭಾಗಿಯಾಗಿರುವ ವಿರುದ್ಧ ಕ್ರಮಕೈಗೊಳ್ಳುವಂತೆ ಹಿಂದಿನ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು ಯಾವುದೇ ರೀತಿ ಕ್ರಮಕೈಗೊಂಡಿಲ್ಲ ಎಂದು ದೂರಿದರು.
ಈ ಕೃತ್ಯದಲ್ಲಿ ಭಾಗಿಯಾಗಿರುವ ವಿಷಯ ನಿರ್ವಾಹಕ, ಕಂದಾಯ ನಿರೀಕ್ಷಕ, ಶಿರಸ್ಥೇದಾರ್, ಗ್ರಾಮ ಲೆಕ್ಕಾಧಿಕಾರಿಗಳ ವಿರುದ್ಧ ಈಗಾಗಲೇ ಪೊಲೀಸ್ ಠಾಣೆಯಲ್ಲಿ ಭೂ ಕಂದಾಯ ಕಾಯಿದೆ 1967ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖಾ ವರದಿ ಸಹ ತಯಾರಿಸಿದ್ದಾರೆ. ಆದರೆ ಸರ್ಕಾರಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲು ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ವಿಳಂಭ ಧೋರಣೆ ಅನುಸರಿಸುತ್ತಿದ್ದಾರೆ ಎಂದರು.
ಮಾಲೂರು ತಾಲೂಕು ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಬೆಂಗಳೂರ-ಚೆನ್ನೈ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದ್ದು, ರಸ್ತೆ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ ಪರಿಹಾರ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿಕೊಂಡಿರುವವರ ಪೈಕಿ ಅಕ್ರಮ ಮಂಜೂರು ಪಡೆದುಕೊಂಡಿರುವುದು ಬೆಳಕಿಗೆ ಬರುತ್ತಿದೆ, ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶ ಮಾಡಿ ತಪ್ಪಿ ತಸ್ಥರ ವಿರುದ್ಧ ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು, ಇಲ್ಲದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಚ್ಚರಿಕೆ ನೀಡಿದರು.
ಮುಖಂಡ ಸಿದ್ಧಾರ್ಥ ಆನಂದ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net