

ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ಪರಿಶೀಲಿಸಿ ವರದಿ ನೀಡಲು ಸರ್ಕಾರ ಸಮಿತಿಯೊಂದನ್ನು ರಚಿಸಿ ಆದೇಶಿಸಿದೆ.
ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸಮಿತಿ ಅಧ್ಯಕ್ಷರಾಗಿದ್ದು, ಆರ್ಥಿಕ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕಾನೂನು ಇಲಾಖೆ ಪ್ರತಿನಿಧಿಗಳು ಹಾಗೂ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರನ್ನು ಈ ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ.
ಈ ಸಮಿತಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಕರ್ನಾಟಕ ರಾಜ್ಯ
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಇತರ ಪಾಲುದಾರರ ಜತೆ ಸಮಾಲೋಚಿಸಿ ಸೂಕ್ತ ಹಾಗೂ ಸ್ಪಷ್ಟ ಶಿಾರಸಿನೊಂದಿಗೆ ಒಂದು ತಿಂಗಳ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ.
-2017ರ ಹೊಸ ವೃಂದ ಮತ್ತು ನೇಮಕ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸದಿರುವುದು.
-ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕಕರಿಗೆ ಆಗಿರುವ ಅನ್ಯಾಯ ಸರಿಪಡಿಸುವುದು.
-ಪದವಿ ಪೂರೈಸಿದ ಶಿಕ್ಷಕರನ್ನು 6 ರಿಂದ 8ಕ್ಕೆ ಸೇವಾ ನಿತರ ಪದವೀಧರ ಶಿಕ್ಷಕರೆಂದು
ಒಂದು ಬಾರಿ ಪದನಾಮೀಕರಿಸುವುದು.