

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೂತನವಾಗಿ ಜಾಹೀರಾತು ಪರಿಶೀಲನಾ ಸಮಿತಿ ರಚಿಸಿದ್ದು, ಅಧ್ಯಕ್ಷರನ್ನಾಗಿ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಅವರನ್ನು ನೇಮಿಸಲಾಗಿದೆ. ಸದಸ್ಯರಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ರಾಮಚಂದ್ರಪ್ಪ, ಪತ್ರಕರ್ತೆ ನಹೀದ್ ಅತಾವುಲ್ಲಾ, ಸದಸ್ಯ ಕಾರ್ಯದರ್ಶಿಯಾಗಿ ವಾರ್ತಾ ಇಲಾಖೆ ಆಯುಕ್ತರು ಕಾರ್ಯನಿರ್ವಹಿಸುವರು.