

ಗುವಾಹಟಿ: ಅಸ್ಸಾಂನ ಮಾಜಿ ಮುಖ್ಯಮಂತ್ರಿ ಪ್ರಫುಲ್ಲ ಕುಮಾರ್ ಮಹಾಂತ ಅವರು ಶುಕ್ರವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಸ್ಸೋಮ್ ಗಣ ಪರಿಷದ್ನ ಹಿರಿಯ ನಾಯಕ ಮಹಾಂತ ಅವರಿಗೆ ಬ್ರೇನ್ ಸ್ಟ್ರೋಕ್ ಉಂಟಾದ ಕಾರಣ ಡೌನ್ಟೌನ್ ಹಾಸ್ಪಿಟಲ್ ಗೆ ದಾಖಲಿಸಲಾಗಿದೆ.
ಡೌನ್ಟೌನ್ ಹಾಸ್ಪಿಟಲ್ನ ಐಸಿಯುನಲ್ಲಿ ಮಹಾಂತ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಡಾಕ್ಟರ್ಗಳ ತಂಡ ಅವರ ಆರೋಗ್ಯದ ಬಗ್ಗೆ ನಿಗಾವಹಿಸಿದ್ದು, ಸದ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. (ಏಜೆನ್ಸೀಸ್)