ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿತಿ ಹೀಗಿದೆ..

buddhadev bhattaracharya
Published on

ಕೋಲ್ಕತಾ: ತೀವ್ರ ಅನಾರೋಗ್ಯದ ಹಿನ್ನೇಲೆ ಹಾಗೂ ಉಸಿರಾಟ ತೊಂದರೆಯ ಕಾರಣದಿಂದಾಗಿ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ಪಾಕಿಸ್ತಾನ, ಚೀನಾ, ಭಾರತ ಆಯ್ತು.. ಈಗ ಶ್ರೀಲಂಕಾದಿಂದ ಬಂದು ಯುವಕನನ್ನು ವರಿಸಿದ ಯುವತಿ

ಉಸಿರಾಟ ತೊಂದರೆ ಸೇರಿದಂತೆ ದೀರ್ಘಕಾಲದ ಶ್ವಾಸಕೋಶದ ಕಾಯಿಲೆಯಿಂದಾಗಿ ಬಳಲುತ್ತಿರುವ ಅವರು ಇಂದು ಮಧ್ಯಾಹ್ನ ಹದಗೆಟ್ಟು ಪ್ರಜ್ಞಾಹೀನರಾದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿ, ಅಲಿಪುರದ ವುಡ್‌ಲ್ಯಾಂಡ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಎಂ ಆರೋಗ್ಯದ ಮೇಲೆ ನಿಗಾ ಇಡಲು ಹೃದ್ರೋಗ ತಜ್ಞರು ಮತ್ತು ಶ್ವಾಸಕೋಶ ತಜ್ಞರು ಸೇರಿದಂತೆ ಹಿರಿಯ ವೈದ್ಯರ ತಂಡವನ್ನು ರಚಿಸಲಾಗಿದ್ದು, ಅವರ ಪತ್ನಿ ಮೀರಾ ಭಟ್ಟಾಚಾರ್ಯ ಮತ್ತು ಪುತ್ರಿ ಸುಚೇತನಾ ಭಟ್ಟಾಚಾರ್ಯ ಇಬ್ಬರೂ ಆಸ್ಪತ್ರೆಯಲ್ಲಿದ್ದಾರೆ.

ಸಿಎಂ ಸ್ಥಿತಿ ಗಂಭೀರವಾಗಿದ್ದು, ರಕ್ತದಲ್ಲಿನ ಆಮ್ಲಜನಕದ ಮಟ್ಟದ ಕುಸಿತ ಹಾಗೂ ಅಗತ್ಯ ರಕ್ತದೊತ್ತಡ ಮಟ್ಟವನ್ನು ಕಾಪಾಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎನ್ನಲಾಗಿದೆ. ಭಟ್ಟಾಚಾರ್ಯರು ತಮ್ಮ ಅನಾರೋಗ್ಯದ ಕಾರಣದಿಂದ ಕಳೆದ ಕೆಲವು ವರ್ಷಗಳಿಂದ ಸಾರ್ವಜನಿಕ ಜೀವನದಿಂದ ದೂರವಿದ್ದರು. ಭಟ್ಟಾಚಾರ್ಯರು 2000 ರಿಂದ 2011 ರವರೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net