ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

HD Kumaraswamy (1)
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: ಚುನಾವಣೆ ಕಾವೇರಿರುವಾಗ ಪ್ರಚಾರ ಮತ್ತಿತರ ಚಟುವಟಿಕೆಗಳಲ್ಲಿ ಚುರುಕಿನಿಂದ ತೊಡಗಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸದ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ವಿಶ್ರಾಂತಿ ನಂತರ ಮರಳಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ಅವರು ಹೇಳಿಕೆ ನೀಡಿದ್ದಾರೆ.

ನಿರಂತರ ಪ್ರವಾಸದಿಂದ ಜ್ವರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net